ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಇನ್ನು ಕೆಲವೇ ತಿಂಗಳಿನಲ್ಲಿ ಸೌರ ವಿದ್ಯುತ್ ಘಟಕ ತಲೆ ಎತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕವನ್ನು ಸ್ಥಾಪಿಸುವ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡಲಾಗುವುದು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುಮಾರು 64 ಕೋಟಿ ರೂ. ವೆಚ್ಚದಲ್ಲಿ ಈ ಘಟಕದ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಕಳೆದ ವರ್ಷವೇ ಈ ಕೆಲಸಕ್ಕಾಗಿ ಗುಜರಾತ್ನ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆ ಬಳಿಕ ಟ್ರಾನ್ಸ್ಫಾರ್ಮರ್ಗಳ ಅಳವಡಿಕೆ, ಕೇಬಲ್ ಅಳವಡಿಕೆ ಸೇರಿದಂತೆ ಮತ್ತಿತರ ಕೆಲಸಗಳನ್ನು ಮಾಡಲಾಗಿತ್ತು ಎಂದು ಪ್ರಮೋದ್ ತಿಳಿಸಿದ್ದಾರೆ.
ಹಸಿರು ನವೀಕರಣ ಇಂಧನವನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಈ ಯೋಜನೆಗೆ ರೂಪುರೇಷೆಗಳನ್ನು ಹಾಕಲಾಗಿದೆ. ಈ ಘಟಕದಲ್ಲಿ ಉತ್ಪಾದನೆಯಾಗುವ ಸೌರ ವಿದ್ಯುತ್ ಅನ್ನು ನಗರದ ಟರ್ಮಿನಲ್ ಕಟ್ಟಡಗಳ ಅವಶ್ಯಕತೆಗೆ ಬಳಕೆ ಮಾಡಬಹುದು. ಇದಕ್ಕೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳು ಸಂಪೂರ್ಣಗೊಂಡ ಬಳಿಕ ಹುಬ್ಬಳ್ಳಿ ವಿದ್ಯುತ್ ಬಿಲ್ನಲ್ಲಿ 80%-90% ಕಡಿತವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಘಟಕದಲ್ಲಿ ಉತ್ಪಾದನೆಯಾಗುವ ಸೌರ ವಿದ್ಯುತ್ ಅನ್ನು ಕೆಪಿಟಿಸಿ ಮೂಲಕ ಇತರ ವಿಮಾನ ನಿಲ್ದಾಣಗಳಿಗೆ ಪೂರೈಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ 30 ಎಕರೆ ಭೂಮಿಯನ್ನು ಗುರುತಿಸಲಾಗಿದೆ. 24 ಎಕರೆಗಳಲ್ಲಿ 400 ಸೌರ ವಿದ್ಯುತ್ ಘಟಕಗಳನ್ನು ನಿರ್ಮಾಣ ಮಾಡಲಾಗುತ್ತದೆ. ಉಳಿದ ಸ್ಥಳಾವಕಾಶವನ್ನು ಟ್ರಾನ್ಸ್ಫಾರ್ಮರ್, ಕೊಠಡಿಗಳು ಸೇರಿದಂತೆ ಇನ್ನಿತರ ಉದ್ದೇಶಗಳಿಗಾಗಿ ಬಳಕೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.