ಬೆಂಗಳೂರು: ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಯ ಚುನಾವಣೆಯನ್ನು ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.
198 ವಾರ್ಡ್ಗಳಿಗೆ ಸಂಬಂಧಿಸಿದಂತೆ ಈ ಚುನಾವಣೆ ನಡೆಯಲಿದೆ. ಚುನಾವಣೆಯ ವೇಳಾಪಟ್ಟಿಯನ್ನು ಮುಂದಿನ 6 ವಾರಗಳಲ್ಲಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗಕ್ಕೆ ರಾಜ್ಯ ಹೈಕೋರ್ಟ್ ತಿಳಿಸಿದೆ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ನಡೆಸುವಂತೆ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಗಳ ಆಧಾರದಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ಈ ಸಂಬಂಧ ವಾದ- ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎ. ಎಸ್. ಒಕಾ ನೇತೃತ್ವದ ವಿಭಾಗೀಯ ಪೀಠ ಈ ತೀರ್ಪನ್ನು ಪ್ರಕಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.