ನವದೆಹಲಿ: ದೇಶದ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ವಿಚಾರಕ್ಕೆ ಸಂಬಂಧಿಸಿದಂತೆ ಕೆನಡಾದ ಹೈಕಮಿಷನರ್ಗೆ ಭಾರತ ಸಮನ್ಸ್ ನೀಡಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯ, ಭಾರತದ ಆಂತರಿಕ ವಿಚಾರಗಳಲ್ಲಿ ಇನ್ಯಾವುದೇ ರಾಷ್ಟ್ರಗಳು ಹಸ್ತಕ್ಷೇಪ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹ ನಡೆಗಳು ಮುಂದುವರಿದಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೆನಡಾದ ಹೈಕಮಿಷನರ್ಗೆ ತಿಳಿಸಿರುವುದಾಗಿ ಹೇಳಿದೆ. ಆ ಮೂಲಕ ರಾಜತಾಂತ್ರಿಕ ಪ್ರತಿಭಟನೆಯನ್ನು ದಾಖಲಿಸಿರುವುದಾಗಿಯೂ ತಿಳಿಸಿದೆ.
ಟ್ರುಡೋ, ರೈತರ ಶಾಂತಿಯುತ ಪ್ರತಿಭಟನೆಯನ್ನು ಸಮರ್ಥನೆ ಮಾಡಿದ್ದರು. ಹಾಗೆಯೇ ದೆಹಲಿಯಲ್ಲಿನ ಪರಿಸ್ಥಿತಿ ಕಳವಳಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಟ್ರುಡೋ ಸೇರಿದಂತೆ ಇನ್ನೂ ಹಲವು ನಾಯಕರ ಇಂತಹ ಹೇಳಿಕೆಗಳು ಕೆನಡಾದಲ್ಲಿನ ಭಾರತದ ಹೈಕಮಿಷನ್, ಕಾನ್ಸುಲೇಟ್ ಕಚೇರಿಯ ಮುಂದೆ ತೀವ್ರಗಾಮಿಗಳ ಪ್ರತಿಭಟನೆಗೂ ಕಾರಣವಾಗಿತ್ತು ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.