ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಇಂದು ವಿಶ್ವ ಹಿಂದು ಪರಿಷತ್ತಿನ ಕದ್ರಿ ವಿಶ್ವಶ್ರೀ ಕಾರ್ಯಾಲಯದಲ್ಲಿ ವಿಶೇಷ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.
ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ವಿಶೇಷ ಕಾರ್ಯಾಲಯವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಡಾ.ಪಿ. ವಾಮನ ಶೆಣೈ ಪ್ರಾಂತ ಸಹ ಸಂಘಚಾಲಕ್, ಗೋಪಾಲ ಚೆಟ್ಟಿಯಾರ್ ವಿಭಾಗ ಸಂಘಚಾಲಕರು, ಡಾ.ಸತೀಶ್ ರಾವ್ ಮಹಾನಗರ ಸಂಘಚಾಲಕರು, ಸುನಿಲ್ ಆಚಾರ್ಯ ಮಹಾನಗರ ಸಹ ಸಂಘಚಾಲಕರು, ಪ್ರೊ.ಎಂ ಬಿ ಪುರಾಣಿಕ್ ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಮುಖ್, ಶರಣ್ ಪಂಪುವೆಲ್ ವಿಭಾಗ ಕಾರ್ಯದರ್ಶಿ, ಶಾಸಕರುಗಳಾದ ಡಾ.ವೈಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಉಮಾನಾಥ ಕೋಟ್ಯಾನ್, ಸಂಘ ಪರಿವಾರದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.