ಹೈದರಾಬಾದ್: ‘ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್’ (ಜಿಎಚ್ಎಂಸಿ) ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭೂತಪೂರ್ವ ರೀತಿಯಲ್ಲಿ ಗೆಲುವು ಸಾಧಿಸಿದೆ.
ವರದಿಗಳ ಪ್ರಕಾರ, ಆಡಳಿತರೂಢ ಟಿಆರ್ಎಸ್ 56 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ 49 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಎಐಎಂಐಎಂ 43 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 2 ಸ್ಥಾನಗಳನ್ನು ಪಡೆದುಕೊಂಡಿದೆ.
ʼಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್’ನಲ್ಲಿ ಹಿಂದೆ ಬಿಜೆಪಿ ಕೇವಲ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿತ್ತು. ಇದೀಗ ಅದು 49 ಸ್ಥಾನಗಳನ್ನು ಪಡೆದುಕೊಂಡು ಅಭೂತಪೂರ್ವ ರೀತಿಯಲ್ಲಿ ಗೆಲುವನ್ನು ಸಾಧಿಸಿದೆ.
ಡಿಸೆಂಬರ್ 1ರಂದು ಜಿಎಚ್ಎಂಸಿಎಯ 150 ವಾರ್ಡ್ಗಳಿಗೆ ಚುನಾವಣೆ ನಡೆದಿತ್ತು. ಕರೋನವೈರಸ್ ಕಾರಣದಿಂದಾಗಿ ಮತಪತ್ರಗಳನ್ನು ಬಳಸಿ ಚುನಾವಣೆಯನ್ನು ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ಸುಮಾರು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.