ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬಹಿರಂಗವಾಗಿ ಒಟ್ಟುಗೂಡುವುದಕ್ಕೆ ಕಡಿವಾಣ ಹಾಕಬೇಕಿದೆ. ಕೋವಿಡ್-19 ಎರಡನೇ ಹಂತದ ಕಾರಣಕ್ಕೆ ನೈಟ್ ಕರ್ಫ್ಯೂ ಹೇರುವ ಬಗ್ಗೆ ಇನ್ನಷ್ಟೇ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವರ ಜೊತೆಗೆ ಚರ್ಚಿಸಿ ಮತ್ತೆ ಮುಂದಿನ ಹೆಜ್ಜೆ ಇಡಲಿರುವುದಾಗಿಯೂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ನ್ಯೂ ಇಯರ್ ಸೆಲೆಬ್ರೇಷನ್ಗೆ ಸಂಬಂಧಪಟ್ಟ ಹಾಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಲವ್ ಜಿಹಾದ್, ಡ್ರಗ್ಸ್ ಕೇಸ್ ಮೊದಲಾದವುಗಳ ಬಗೆಗೂ ಸರ್ಕಾರ ಜಾಗೃತಿ ಅಭಿಯಾನವನ್ನು ಸರ್ಕಾರ ನಡೆಸಲಿದೆ. ಗೋ ಹತ್ಯೆ ನಿಷೇಧ ಕಾಯ್ದೆಯ ಬಗೆಗೂ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.