ನವದೆಹಲಿ: ಸಂಸತ್ ಭವನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಡಿ. 10 ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಸಂಬಂಧ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಹಿತಿ ನೀಡಿದ್ದು, ನವದೆಹಲಿಯಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನ ಕಟ್ಟಡಕ್ಕೆ ಮೋದಿ ಭೂಮಿ ಪೂಜೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಕಾಮಗಾರಿ 2022 ರ ಹೊತ್ತಿಗೆ ಸಂಪೂರ್ಣವಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
ಈ ಕಟ್ಟಡವು ಸುಮಾರು 60 ಸಾವಿರ ಚದರ ಮೀ. ವಿಸ್ತೀರ್ಣ ಹೊಂದಿದೆ. ಸ್ವಾಗತ, ತಡೆಗೋಡೆ, ಇತರ ತಾತ್ಕಾಲಿಕ ರಚನೆಗಳನ್ನು ಹೊಂದಿರುವ ಪಾರ್ಲಿಮೆಂಟ್ ಹೌಸ್ ಎಸ್ಟೇಟ್ ಪ್ಲಾಟ್ ಸಂಖ್ಯೆ 118 ರಲ್ಲಿ ನೆಲೆಗೊಳ್ಳಲಿದೆ. ಈ ಭವನದಲ್ಲಿ ಪ್ರತಿಯೊಬ್ಬ ಸದಸ್ಯರಿಗೂ ಪ್ರತ್ಯೇಕ ಕೊಠಡಿಗಳಿರಲಿವೆ. ಜೊತೆಗೆ ಕಾಗದ ರಹಿತ ಕಚೇರಿ ರಚನೆಯನ್ನು ತಡೆಯಲು ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗುವುದು ಎಂದು ಓಂ ಬಿರ್ಲಾ ತಿಳಿಸಿದ್ದಾರೆ.
ಈ ಕಟ್ಟಡದಲ್ಲಿ ಸಂವಿಧಾನ ಸಭಾಂಗಣ, ಸಂಸತ್ ಸದಸ್ಯರಿಗೆ ವಿಶ್ರಾಂತಿ ಕೊಠಡಿ, ಗ್ರಂಥಾಲಯ, ಅನೇಕ ಸಮಿತಿ ಕೊಠಡಿಗಳು, ಡೈನಿಂಗ್, ಪಾರ್ಕಿಂಗ್ ವ್ಯವಸ್ಥೆ ಒಳಗೊಂಡಿದೆ. ಹೊಸ ಸಂಸತ್ ಭವನದ ಲೋಕಸಭೆಯಲ್ಲಿ 888 ಸದಸ್ಯರಿಗೆ ಆಸನ, ರಾಜ್ಯಸಭೆಯ ಮೇಲ್ಮನೆ ಸದಸ್ಯರಿಗೆ 384 ಆಸನ ಸಾಮರ್ಥ್ಯ ಹೊಂದಿದೆ. ಸದ್ಯ ಅಸ್ತಿತ್ವದಲ್ಲಿರುವ ಕಟ್ಟಡ ಬ್ರಿಟಿಷ್ ಯುಗದ ಕಟ್ಟಡವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.