ಲಕ್ನೋ: ಉತ್ತರಪ್ರದೇಶದಲ್ಲಿ ಬಲವಂತದ ಮತಾಂತರ ತಡೆ ಕಾನೂನು ಜಾರಿಯಾಗಿರುವುದು ಎಲ್ಲರಿಗೂ ತಿಳಿದೇ ಇರುವ ಸಂಗತಿ. ಇದೀಗ ಈ ಕಾನೂನಿನ ಅಡಿಯಲ್ಲಿ ಪೊಲೀಸರು ಶನಿವಾರ ಏಳು ಮಂದಿಯನ್ನು ಬಂಧನಕ್ಕೆ ಒಳಪಡಿಸಿದ್ದಾರೆ.
ಸೀತಾಪುರ ಜಿಲ್ಲೆಯಲ್ಲಿ ಹಿಂದೂ ಯುವತಿಯನ್ನು ಮನೆಯಿಂದ ಅಪಹರಿಸಿದ ಆರೋಪದ ಮೇರೆಗೆ ಈ ಬಂಧನ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಜಬ್ರೇಲ್ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 24ರಂದು ಈ ಘಟನೆ ನಡೆದಿದೆ. ನವೆಂಬರ್ 27ರಂದು ಪ್ರಕರಣ ದಾಖಲಾಗಿದೆ. ಅಂದಿನಿಂದಲೇ ಪ್ರಕರಣದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ರಾಜೀವ್ ದೀಕ್ಷಿತ್ ಅವರು, “ಬಲವಂತದ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ 8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅದರಲ್ಲಿ 7 ಜನರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ. ಆತನನ್ನೂ ಶೀಘ್ರದಲ್ಲೇ ಬಂಧಿಸುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.