ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಇಂದಿನಿಂದ 1 ವಾರಗಳ ಕಾಲ ನಡೆಯಲಿದೆ.
ಸ್ಪೀಕರ್ ಹಾಗೂ ಸಭಾಪತಿಯವರ ನೇತೃತ್ವದಲ್ಲಿ ಈ ಅಧಿವೇಶನ ಡಿ. 15 ರ ವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ ಬಿಬಿಎಂಪಿ ವಿಧೇಯಕ ಸೇರಿದಂತೆ ಹಲವು ಮಹತ್ವದ ವಿಧೇಯಕಗಳ ಮಂಡನೆಯೂ ಅಗಲಿದೆ. ಡಿ. 14-15 ರಂದು ‘ಒಂದು ದೇಶ, ಒಂದು ಚುನಾವಣೆ’ ಗೆ ಸಂಬಂಧಿಸಿದಂತೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನ ಬೆಂಗಳೂರಿನಲ್ಲಿಯೇ ನಡೆಯಲಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಈ ವರೆಗೆ ಚಳಿಗಾಲದ ಅಧಿವೇಶನ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಬೆಳಗಾವಿ ಬದಲಿಗೆ ಬೆಂಗಳೂರಲ್ಲೇ ಅಧಿವೇಶನ ನಡೆಯಲಿದೆ. ಪ್ರತಿಪಕ್ಷಗಳು ಈ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ವಾಕ್ಸಮರ ನಡೆಸಲು ಸಿದ್ಧತೆ ನಡೆಸುತ್ತಿದ್ದರೆ, ಬಿಜೆಪಿ ಇವೆಲ್ಲಕ್ಕೂ ತಕ್ಕ ಪ್ರತ್ಯುತ್ತರ ನೀಡುವುದಕ್ಕೆ ಸಿದ್ಧತೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.