ನವದೆಹಲಿ: ಸಣ್ಣ ನಗರಗಳನ್ನು ಸ್ವಾವಲಂಬಿ ಭಾರತದ ಪ್ರಮುಖ ಆಧಾರವಾಗಿಸುವತ್ತ ಸರ್ಕಾರ ಗಮನ ಹರಿಸುತ್ತಿದೆ ಮತ್ತು ಆಗ್ರಾದಲ್ಲಿನ ಮೆಟ್ರೋ ಯೋಜನೆ ಈ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗ್ರಾ ಮೆಟ್ರೋ ನಿರ್ಮಾಣ ಕಾರ್ಯವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
“ಎಲ್ಲರೂ ಪ್ರಸ್ತುತ ಕರೋನಾ ಲಸಿಕೆಗಾಗಿ ಕಾಯುತ್ತಿದ್ದಾರೆ ಮತ್ತು ಇದು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಆದರೆ ಅದು ಬರುವವರೆಗೂ ನಾವು ಸಾಮಾಜಿಕ ಅಂತರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಪ್ರಧಾನಿ ಹೇಳಿದ್ದಾರೆ.
ಮೆಟ್ರೊ ಸೇವೆಗಳ ಆರ್ಥಿಕ ಪ್ರಾಮುಖ್ಯತೆಯನ್ನು ಪ್ರಧಾನಿ ಒತ್ತಿಹೇಳಿದರು ಮತ್ತು ಈ ಪ್ರಾಚೀನ ನಗರದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಮೆಟ್ರೊ ಸಹಾಯ ಮಾಡುತ್ತದೆ ಮತ್ತು ಸ್ಥಳೀಯ ಪ್ರವಾಸೋದ್ಯಮಕ್ಕಾಗಿ ದೇಶವನ್ನು ಧ್ವನಿಯಾಗಿಸಲು ಸರ್ಕಾರ ಗಮನಹರಿಸುತ್ತಿದೆ ಎಂದಿದ್ದಾರೆ.
ಪ್ರವಾಸ ಮತ್ತು ಪ್ರವಾಸೋದ್ಯಮ ಸ್ಪರ್ಧಾತ್ಮಕ ಸೂಚ್ಯಂಕದಲ್ಲಿ ದೇಶವು 65 ನೇ ಸ್ಥಾನದಿಂದ 34 ನೇ ಸ್ಥಾನಕ್ಕೆ ಏರಿದೆ ಎಂದು ಅವರು ಹೇಳಿದರು.
2014 ರವರೆಗೆ ಭಾರತದಲ್ಲಿ ಕೇವಲ 225 ಕಿ.ಮೀ ಮೆಟ್ರೊ ಮಾರ್ಗ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಕಳೆದ 6 ವರ್ಷಗಳಲ್ಲಿ ಮೆಟ್ರೋ ಈಗ ದೇಶದಲ್ಲಿ 400 ಕಿ.ಮೀ.ಗಿಂತ ಹೆಚ್ಚು ಮಾರ್ಗದಲ್ಲಿ ಚಲಿಸುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.