ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಗಳು ಡಿಸೆಂಬರ್ 8ರಂದು ಕರೆ ನೀಡಿರುವ ‘ಭಾರತ್ ಬಂದ್’ನ ಹಿನ್ನೆಲೆಯಲ್ಲಿ, ಗೃಹ ಸಚಿವಾಲಯವು ಸೋಮವಾರ ಎಲ್ಲಾ ರಾಜ್ಯಗಳಿಗೆ ಸಲಹೆ ಸೂಚನೆಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.
“ಬಂದ್ ಶಾಂತಿಯುತವಾಗಿ ನಡೆಯಬೇಕು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು” ಎಂದು ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.
ವರದಿಯ ಪ್ರಕಾರ, ರೈತರ ಆಂದೋಲನವನ್ನು ಮಾತುಕತೆಯ ಮೂಲಕ ಬಗೆಹರಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನಗಳು ಯಾವುದೇ ಫಲ ನೀಡುತ್ತಿಲ್ಲ. ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಯ ಬಗ್ಗೆ ಕೆಲವು ರೈತ ಸಂಘಗಳು ಅಚಲವಾದ ನಿಲುವು ತಾಳಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.