ಶಿವಮೊಗ್ಗ: ಕೊರೋನಾ ಲಸಿಕೆ ಲಭ್ಯವಾದ ತಕ್ಷಣವೇ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ನಾಲ್ಕು ಕೊರೋನಾ ಲಸಿಕೆ ಸಂಗ್ರಹ ಕೇಂದ್ರಗಳನ್ನು ಸ್ಥಾಪನೆ ಮಾಡಲು ಮುಂದಾಗಿದೆ.
ಲಸಿಕೆ ಸಂಗ್ರಹದ ಹಿನ್ನೆಲೆಯಲ್ಲಿ ಬೃಹತ್ ಜಾಗಗಳ ಅಗತ್ಯತೆ ಇದ್ದು, ಸೂಕ್ತ ಪ್ರದೇಶಗಳ ಆಯ್ಕೆಯನ್ನು ಸಹ ಈಗಾಗಲೇ ಮಾಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಸಹ ಎಲ್ಲಾ ಜಿಲ್ಲೆಗಳಿಗೂ ಮೊದಲ ಹಂತದಲ್ಲಿ ಲಸಿಕೆ ವಿತರಣೆಗೆ ಅನುಕೂಲವಾಗುವಂತೆ ಆರೋಗ್ಯ ಕಾರ್ಯಕರ್ತರ ಪಟ್ಟಿಯನ್ನು ಸಿದ್ಧಪಡಿಸುವಂತೆಯೂ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈ ಕೆಲಸವನ್ನು ಸಹ ಜಿಲ್ಲಾಡಳಿತ ಆರಂಭ ಮಾಡಿದೆ.
ಈಗಾಗಲೇ ಕೊರೋನಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಿದ 20,549 ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿರುವುದಾಗಿಯೂ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಮುಂದಿನ ವರ್ಷದ ಜನವರಿ ಅಂತ್ಯದೊಳಗೆ ಲಸಿಕೆ ಸಿದ್ಧವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕರ್ತರ ಪಟ್ಟಿ ಸಿದ್ಧ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.