ನವದೆಹಲಿ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪೊಲೀಸರು ಸೋಮವಾರ ಬಿಜೆಪಿ ಕಾರ್ಯಕರ್ತರ ಮೇಲೆ ಜಲ ಫಿರಂಗಿಗಳನ್ನು ಮತ್ತು ಅಶ್ರುವಾಯು ಬಳಸಿ ಅವರನ್ನು ಚದುರಿಸಲು ಪ್ರಯತ್ನಿಸಿದ್ದಾರೆ.
ಪ್ರತಿಭಟನಾಕಾರರನ್ನು ಪ್ರದೇಶದಿಂದ ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬಿಜೆಪಿ ಬೆಂಬಲಿಗರು ಬ್ಯಾರಿಕೇಡ್ಗಳನ್ನು ಮುರಿದು ಮುನ್ನಗ್ಗಲು ಪ್ರಯತ್ನಿಸಿದ ಸಂದರ್ಭದಲ್ಲಿ ಪೊಲೀಸರರು ಮತ್ತು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಭಾರತೀಯ ಜನತ ಯುವ ಮೋರ್ಚಾ (ಬಿಜೆವೈಎಂ) ಕರೆದಿರುವ ‘ಉತ್ತರಕಾನ್ಯ ಅಭಿಜಾನ್’ ನ ಭಾಗವಾಗಿ ಎರಡು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದರು, ಉತ್ತರ ಬಂಗಾಳದ ಜನರಿಗೆ ನೀಡಿದ ಭರವಸೆಗಳನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ ಮತ್ತು ಕಲ್ಯಾಣದ ಪ್ರಯೋಜನಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.