ನವದೆಹಲಿ: ಸೇರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮೇಡ್-ಇನ್ ಇಂಡಿಯಾ ಕೋವಿಡ್ ಲಸಿಕೆ ಅಭ್ಯರ್ಥಿ ಕೋವಿಶೀಲ್ಡ್ ತುರ್ತು ಅನುಮೋದನೆಗಾಗಿ ಅರ್ಜಿ ಸಲ್ಲಿಸಿದೆ.
ಸಂಸ್ಥೆಯ ಸಿಇಒ ಆದರ್ ಪೂನವಾಲ್ಲಾ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ ಮತ್ತು ಇದು ಅಸಂಖ್ಯಾತ ಜೀವಗಳನ್ನು ಉಳಿಸುತ್ತದೆ ಎಂದು ಹೇಳಿದ್ದಾರೆ
ಲಸಿಕೆ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಅಮೂಲ್ಯವಾದ ಬೆಂಬಲಕ್ಕಾಗಿ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು.
ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದಕ ಸೇರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ ಪಿಎಲ್ಸಿಯ ಕೋವಿಡ್-19 ಲಸಿಕೆ ಅಭ್ಯರ್ಥಿಗೆ ದೇಶದಲ್ಲಿ ತುರ್ತು ಬಳಕೆಯ ಅನುಮತಿಯನ್ನು ಕೋರಿತ್ತು.
ಸಾಂಕ್ರಾಮಿಕ ರೋಗದಿಂದಾಗಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವೈದ್ಯಕೀಯ ಅಗತ್ಯತೆಗಳನ್ನು ಉಲ್ಲೇಖಿಸಿ ಕಂಪನಿಯು ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ಗೆ ಅರ್ಜಿ ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.