ನವದೆಹಲಿ: ಆಟಿಕೆ ಉತ್ಪಾದನೆಯಲ್ಲಿ ಭಾರತವನ್ನು ಆತ್ಮನಿರ್ಭರಗೊಳಿಸುವ ಮಹತ್ತರವಾದ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವಾಗಿ ಮೈಗೌವ್ನಲ್ಲಿ ರಾಷ್ಟ್ರೀಯ ಮಟ್ಟದ ಟಾಯ್ ಹ್ಯಾಕಥಾನ್ ಅನ್ನು ಆಯೋಜಿಸಲಾಗಿದೆ.
ಆಟಿಕೆ ಉತ್ಪಾದನೆಯಲ್ಲಿ ಭಾರತವನ್ನು ವಿಶ್ವ ಭೂಪಟದಲ್ಲಿ ಅಗ್ರ ಸ್ಥಾನದಲ್ಲಿ ಇರಿಸುವ ಮಹತ್ವಾಕಾಂಕ್ಷೆಯೊಂದಿಗೆ ಹ್ಯಾಕಥಾನ್ ಆಯೋಜಿಸಲಾಗಿದೆ. ಇದರಲ್ಲಿ ಭಾಗವಹಿಸಿ 1 ಲಕ್ಷ ರೂಪಾಯಿಯವರೆಗೆ ಬಹುಮಾನ ಗೆಲ್ಲುವ ಅವಕಾಶ ಭಾರತೀಯರಿಗೆ ಸಿಗಲಿದೆ.
ಈ ʼಆತ್ಮನಿರ್ಭರ ಟಾಯ್ಸ್ ಇನ್ನೋವೇಶನ್ ಚಾಲೆಂಜ್ʼ ಸ್ಪರ್ಧೆಯಲ್ಲಿ ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಆಟಿಕೆ ಆಧಾರಿತ ಗೇಮಿಂಗ್ ಅನ್ನು ಡೆವಲಪ್ ಮಾಡಬೇಕು.
ಹೆಸರು ನೋಂದಾಯಿಸಲು ಕೊನೆಯ ದಿನಾಂಕ 2021ರ ಜನವರಿ 20.
https://innovateindia.mygov.in/toy-hackathon/ ಈ ಲಿಂಕ್ ತೆರೆದು ಹೆಸರನ್ನು ನೋಂದಾಯಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.