ನವದೆಹಲಿ: ಪ್ರತಿಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಬಿಜೆಪಿ ಮುಖಂಡ ಮತ್ತು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಸೋಮವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು. ಸ್ವತಂತ್ರ ಅಭ್ಯರ್ಥಿ ಶ್ಯಾಮ್ ನಂದನ್ ಪ್ರಸಾದ್ ಸ್ಪರ್ಧಿಸಲು ನಿರ್ಧರಿಸಿದ್ದರು, ಆದರೆ ಕನಿಷ್ಠ 10 ಶಾಸಕರ ಬೆಂಬಲವನ್ನು ಪಡೆಯಲು ವಿಫಲವಾದ ಕಾರಣ ಅವರ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.
ಈ ಸಂದರ್ಭದಲ್ಲಿ ಸುಶೀಲ್ ಮೋದಿ ಅವರು, ರಾಜ್ಯಸಭೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಧನ್ಯವಾದ ಅರ್ಪಿಸಿದರು.
ತಮ್ಮ ಉಮೇದುವಾರಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಎನ್ಡಿಎ ಮಿತ್ರಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ಅವರು, ಬಿಹಾರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರೆಸುತ್ತೇಬೆ ಮತ್ತು ರಾಜ್ಯದ ಅಭಿವೃದ್ಧಿಗೆ ಸಹಕರಿಸುತ್ತೇನೆ ಎಂದು ಭರವಸೆ ನೀಡಿದರು.
ಅಕ್ಟೋಬರ್ 8, 2020 ರಂದು ಎಲ್ಜಿಪಿ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದಾಗಿ ತೆರವಾಗಿದ್ದ ರಾಜ್ಯಸಭೆಯ ಸ್ಥಾನಕ್ಕೆ ಸುಶೀಲ್ ಕುಮಾರ್ ಮೋದಿ ಅವರ ಆಯ್ಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.