ಬೆಂಗಳೂರು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಎದ್ದಿದ್ದ ಗೊಂದಲಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ.
ವಿಧಾನ ಮಂಡಲ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಈ ಸಂಬಂಧ ಬಂದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯ ಹೊಣೆ ಸ್ಥಳೀಯ ಸಂಸ್ಥೆಗಳದ್ದೇ ಆಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಗರ ಪ್ರದೇಶಗಳ ಮೂಲಕ ಮತ್ತು ಪಟ್ಟಣಗಳ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಸರ್ಕಾರ ಈ ಹಿಂದೆಯೇ ಆದೇಶಿಸಿತ್ತು. ಈ ಆದೇಶದ ಮೊದಲು ಸಹ ಸ್ಥಳೀಯ ಸಂಸ್ಥೆಗಳ ನಿರ್ವಹಣಾ ಜವಾಬ್ದಾರಿಯನ್ನು ಸ್ಥಳೀಯ ಸಂಸ್ಥೆಗಳೇ ನಿರ್ವಹಿಸುತ್ತಿದ್ದವು ಎಂಬುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್, ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಮಾಡುವ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ಸಮಸ್ಯೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಒದಗಿಸುವ ಕುರಿತು. ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.