ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೂರಾರು ಯೋಜನೆಗಳಿಗೆ ಬೆಂಬಲ ನೀಡುತ್ತಿದೆ ಮತ್ತು 100 ಕ್ಕೂ ಹೆಚ್ಚು ಸ್ಟಾರ್ಟ್-ಅಪ್ಗಳು ಕೊವಿಡ್-19 ಅನ್ನು ಎದುರಿಸಲು ನವೀನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಸೋಮವಾರ ಹೇಳಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಆಯೋಜಿಸಿದ್ದ ಭಾರತ-ಪೋರ್ಚುಗಲ್ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದ ಹರ್ವಷರ್ಧನ್, ಕೋವಿಡ್ -19 ಲಸಿಕೆ ಸಂಶೋಧನೆಗಾಗಿ ಸರ್ಕಾರ 120 ಮಿಲಿಯನ್ ಯುಎಸ್ಡಿ ಅನುದಾನವನ್ನು ಘೋಷಿಸಿದೆ. ಇದನ್ನು ಕೋವಿಡ್ ಸುರಕ್ಷ ಮಿಷನ್ಗಾಗಿ ಒದಗಿಸಲಾಗುತ್ತಿದ್ದು, ಈ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಂಪೂರ್ಣವಾಗಿ ಬಳಸಲಾಗುವುದು ಎಂದರು.
ಸುಮಾರು 30 ಲಸಿಕೆ ಅಭ್ಯರ್ಥಿಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಹರ್ಷವರ್ಧನ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.