ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಭತ್ತ, ರಾಗಿ, ಮೆಕ್ಕೆ ಜೋಳ, ತೊಗರಿ, ಶೇಂಗಾ, ಉದ್ದು, ಹೆಸರು ಕಾಳುಗಳನ್ನು ಖರೀದಿ ಮಾಡಲು ಮುಂದಾಗಿದೆ.
ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಧಾನ್ಯ ಖರೀದಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರ 1.10 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಅನುಮತಿ ನೀಡಿದೆ. ರಾಜ್ಯ ಸರ್ಕಾರ ಹೆಚ್ಚುವರಿ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಭತ್ತ ಖರೀದಿಗೆ ನಿರ್ಧಾರ ಮಾಡಿದೆ. ಆ ಮೂಲಕ ಒಟ್ಟು 2.10 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸವದಿ ಮಾಹಿತಿ ನೀಡಿದ್ದಾರೆ.
ಭತ್ತ ಖರೀದಿ ಹಿನ್ನೆಲೆಯಲ್ಲಿ ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಗೆ ಜನವರಿ ತಿಂಗಳ ಅಂತ್ಯದವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ 15 ರಿಂದ ತೊಡಗಿದಂತೆ ರಾಗಿ, ಬಿಳಿ ಜೋಳ ಖರೀದಿ ಆರಂಭವಾಗಲಿದೆ. ರಾಗಿ ಪ್ರತಿ ಎಕರೆಗೆ 10 ಕ್ವಿಂಟಲ್ನಂತೆ ಗರಿಷ್ಠ 50 ಕ್ವಿಂಟಲ್ ಖರೀದಿ ಮಾಡಲಾಗುವುದು. ಈ ವರ್ಷದಲ್ಲಿ 4 ಮೆಟ್ರಿಕ್ ಟನ್ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸವದಿ ಮಾಹಿತಿ ನೀಡಿದ್ದಾರೆ.
ಇನ್ನು ಬಿಳಿ ಜೋಳ ಖರೀದಿಗೆ ಸಂಬಂಧಿಸಿದಂತೆ ಪ್ರತಿ ಎಕರೆಗೆ 15 ಕ್ವಿಂಟಲ್ನಂತೆ ಗರಿಷ್ಠ 75 ಕ್ವಿಂಟಲ್ ಖರೀದಿಸಲಾಗುತ್ತದೆ. ಇದೇ 15 ರಿಂದ ತೊಗರಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಖರೀದಿಯ ಅವಧಿ 90 ದಿನಗಳದ್ದಾಗಿದೆ ಎಂದು ಸವದಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.