ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟಿಕೆನ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಕಾಶ್ಮೀರ ಪೊಲೀಸರು, ಸೇನೆಯ 55 ಆರ್ಆರ್ ಮತ್ತು ಸಿಆರ್ಪಿಎಫ್ ಜಂಟಿ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ನಿರ್ದಿಷ್ಟ ಮಾಹಿತಿಯ ಮೇರೆಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ತಂಡವು ಶಂಕಿತ ಮನೆಯನ್ನು ಸುತ್ತುವರೆದಿದ್ದರಿಂದ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ಇದರಿಂದಾಗಿ ಎನ್ಕೌಂಟರ್ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡು ಮೂರು ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿದ್ದಾರೆ ಎಂದು ಪೊಲೀಸರಿಗೆ ವಿಶ್ವಾಸಾರ್ಹ ಮಾಹಿತಿ ಬಂದಿತ್ತು.
ಭಯೋತ್ಪಾದಕರು ಆಶ್ರಯ ಪೆಡೆದುಕೊಂಡಿದ್ದ ಮನೆಯಲ್ಲಿ ಗುಂಡಿನ ವಿನಿಮಯ ನಡೆದ ನಂತರ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.