ನವದೆಹಲಿ: ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸಲು 1000 ಖೇಲೋ ಇಂಡಿಯಾ ಸಣ್ಣ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜ್ಜು ಹೇಳಿದ್ದಾರೆ.
ಎಫ್ಐಸಿಸಿಐ ಆಯೋಜಿಸಿದ್ದ ಟರ್ಫ್ 2020ರ 10 ನೇ ಜಾಗತಿಕ ಕ್ರೀಡಾ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ರಿಜ್ಜು, ನಾವು ದೇಶಾದ್ಯಂತ 1000 ಖೇಲೋ ಇಂಡಿಯಾ ಸಣ್ಣ ಕೇಂದ್ರಗಳನ್ನು ಪ್ರಾರಂಭಿಸುತ್ತಿದ್ದೇವೆ, ಅದು ನಿವೃತ್ತ ಕ್ರೀಡಾಪಟುಗಳಿಗೆ ಉದ್ಯೋಗ ಪಡೆಯಲು ಅಥವಾ ಕ್ರೀಡಾ ಸಂಸ್ಕೃತಿಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಸರ್ಕಾರವು ವಿವಿಧ ನೀತಿ ಬದಲಾವಣೆಗಳನ್ನು ಮಾಡಿದ್ದು, ನಿವೃತ್ತಿಯಾದ ಬಳಿಕವೂ ಕ್ರೀಡಾಪಟುಗಳು ಕ್ರೀಡಾ ಸಮುದಾಯವನ್ನು ಪ್ರೋತ್ಸಾಹಿಸಲು ಮತ್ತು ಬೆಂಬಲಿಸಲು ಪೂರಕವಾಗುವಂತೆ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಭಾರತವು ಕ್ರೀಡೆಯಲ್ಲಿ ದೊಡ್ಡ ಸಾಮರ್ಥ್ಯವನ್ನು ಹೊಂದಿದೆ ಆದರೆ ಸರಿಯಾದ ರೀತಿಯಲ್ಲಿ ಬಳಸದೆ ಹೊರತು ಸಾಮರ್ಥ್ಯಕ್ಕೆ ಅರ್ಥವಿಲ್ಲ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.