ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಪರಿಷ್ಕೃತ ದರಪಟ್ಟಿಯನ್ನು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೋನಾ ಪರೀಕ್ಷೆಗಳನ್ನು ನಡೆಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಹಾಗೂ ಇತರ ವಸ್ತುಗಳ ದರವನ್ನು ಗಣನೆಗೆ ತೆಗೆದುಕೊಂಡು ಈ ನೂತನ ದರಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಸಾಯನಿಕ ಮತ್ತು ಅಗತ್ಯ ವಸ್ತುಗಳ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಮರುಪರಿಶೀಲನೆ ಮಾಡಿ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿತ್ತು.
ಆರ್ಟಿ-ಪಿಸಿಆರ್ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಪ್ರಯೋಗಾಲಯಗಳಿಗೆ ಮಾದರಿ ಕಳುಹಿಸಿದಾಗ 500 ರೂ., ಆರ್ಟಿ-ಪಿಸಿಆರ್ ಖಾಸಗಿ ಆಸ್ಪತ್ರೆಗಳಿಂದ ಸ್ವೀಕೃತವಾಗಿರುವ ಮಾದರಿಗಳನ್ನು ಖಾಸಗಿ ಪ್ರಯೋಗಾಲಯಗಳು ಪರೀಕ್ಷಿಸಿದಾಗ 800 ರೂ., ಟ್ರೂ ನ್ಯಾಟ್ ಪರೀಕ್ಷೆ: ಖಾಸಗಿ ಆಸ್ಪತ್ರೆಗಳಿಂದ ಸ್ವೀಕೃತವಾದ ಮಾದರಿಗಳನ್ನು ಖಾಸಗಿ ಪ್ರಯೋಗ ಶಾಲೆಗಳಲ್ಲಿ ಪರೀಕ್ಷಿಸಲು 1250 ರೂ., ಸಿ ಬಿ ನ್ಯಾಟ್ ಪರೀಕ್ಷೆ: ಖಾಸಗಿ ಆಸ್ಪತ್ರೆಗಳಿಂದ ಸ್ವೀಕೃತವಾದ ಮಾದರಿಗಳನ್ನು ಖಾಸಗಿ ಪ್ರಯೋಗಶಾಲೆಗಳಲ್ಲಿ ಪರೀಕ್ಷೆ ನಡೆಸಿದರೆ 2400 ರೂ., ರ್ಯಾಪಿಡ್ ಆಂಟಿಜೆನ್ ಪರೀಕ್ಷೆ: ಖಾಸಗಿ ಪ್ರಯೋಗಾಲಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ 400 ರೂ., ರ್ಯಾಪಿಡ್ ಆಂಟಿಬಾಡಿ ಪರೀಕ್ಷೆ : ಖಾಸಗಿ ಪ್ರಯೋಗಾಲಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ 500 ರೂ. ಗಳನ್ನು ನಿಗದಿ ಮಾಡಿ ಸರ್ಕಾರ ಈ ಪರಿಷ್ಕೃತ ದರಪಟ್ಟಿಯಲ್ಲಿ ಆದೇಶ ಹೊರಡಿಸಿದೆ.
ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಪರಿಷ್ಕೃತ ದರಪಟ್ಟಿಯನ್ನು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.@CMofKarnataka @BSYBJP pic.twitter.com/Bp377cuJKE
— DIPR Karnataka (@KarnatakaVarthe) December 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.