ಜಮ್ಮು: ಜಮ್ಮು ಕಾಶ್ಮೀರದಲ್ಲಿ ಬುಧವಾರ ನಡೆದ ಉಗ್ರರ ದಾಳಿಯ ವಿರುದ್ಧ ಕಾರ್ಯಾಚರಣೆ ನಡೆಸಿದ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಅಲ್ಲದೇ ಒಬ್ಬ ಉಗ್ರನನ್ನು ಜೀವಂತವಾಗಿ ಹಿಡಿದಿವೆ.
ಬಂಧಿತ ಉಗ್ರನನ್ನು ಉಸ್ಮಾನ್ ಖಾನ್ ಎಂದು ಗುರುತಿಸಲಾಗಿದ್ದು, ತಾನು ಪಾಕಿಸ್ಥಾನಿ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಪಾಕ್ನ ಫೈಝಲಾಬಾದ್ ನಿವಾಸಿಯಾಗಿರುವ ಈತ ಪಂಜಾಬಿ ಮತ್ತು ಉರ್ದು ಭಾಷೆಯನ್ನು ಮಾತನಾಡುತ್ತಾನೆ.
ಈ ಉಗ್ರರು ಉಧಮ್ಪುರದ ಶಾಲೆಯೊಂದರಲ್ಲಿ ಮೂವರು ವ್ಯಕ್ತಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು. ಬಳಿಕ ಯೋಧರು ಕಾರ್ಯಾಚರಣೆ ನಡೆಸಿ ಒತ್ತೆಯಾಳುಗಳನ್ನು ಬಿಡಿಸಿ, ಉಗ್ರರನ್ನು ಕೊಂದು ಹಾಕಿದ್ದಾರೆ.
ಸೇನಾ ಸಮವಸ್ತ್ರವನ್ನು ತೊಟ್ಟು ಇವರು ಬಿಎಸ್ಎಫ್ ಪಡೆಯ ಮೇಲೆ ದಾಳಿ ನಡೆಸಿದ ಇವರು ಇಬ್ಬರು ಯೋಧರನ್ನು ಹತ್ಯೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.