ಬೆಂಗಳೂರು: ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಪದೇ ಪದೇ ಪ್ರತಿಭಟನೆ ನಡೆಸುವ ಬದಲು, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಚರ್ಚೆಗೆ ಬನ್ನಿ ಎಂದು ಮಸೂದೆ ವಿರೋಧಿ ಪ್ರತಿಭಟನಾ ನಿರತರಿಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರೈತ ಮುಖಂಡರಿಗೆ ರೈತರ ಮೇಲಿರುವ ಕಾಳಜಿಗಿಂತ ಹೆಚ್ಚಿನ ಕಾಳಜಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಆದ್ದರಿಂದ ಈ ಬಗ್ಗೆ ಯಾವುದೇ ರೀತಿಯ ಅನುಮಾನಗಳಿದ್ದರೆ ಅದನ್ನು ಬಗೆ ಹರಿಸಿಕೊಳ್ಳಿ. ಬದಲಾಗಿ ಪ್ರತಿಭಟನೆ ಸರಿಯಾದ ಕ್ರಮವಲ್ಲ ಎಂದು ತಿಳಿಸಿದ್ದಾರೆ. ಪ್ರತಿನಿತ್ಯ ಪ್ರತಿಭಟನೆಗಳನ್ನು ನಡೆಸುವುದರಿಂದ ಸಾರ್ವಜನಿಕರು ಸಹ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕಾನೂನು ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಹಕಾರಿಯಾಗಲಿದೆ. ರೈತರ ಅಭಿವೃದ್ಧಿ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಜಾರಿಗೊಳಿಸಿದೆ. ಈ ಸಂಬಂಧ ಯಾವುದೇ ಅನುಮಾನಗಳಿದ್ದರೆ ಅದನ್ನು ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎಂದು ಸಿಎಂ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.