ಬೆಂಗಳೂರು: ರಾಜ್ಯವೂ ಸೇರಿದಂತೆ ಇಡೀ ರಾಷ್ಟ್ರವೇ ಕೊರೋನಾ ಎರಡನೇ ಅಲೆಯ ಭೀತಿಯಲ್ಲಿದೆ. ಈಗಾಗಲೇ ಜಗತ್ತಿನ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ಎರಡನೇ ಹಂತದ ಅಲೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಪ್ರಸ್ತುತ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಕಡಿಮೆ ಇದೆ. ಇನ್ನೇನು ಹೊಸ ವರ್ಷ ಸಂಭ್ರಮಾಚರಣೆ ಮಾಡಲು ಹಲವು ಮಂದಿ ಸಿದ್ಧತೆ ನಡೆಸುತ್ತಿರಬಹುದು. ಇದರಿಂದಾಗಿ ಕೊರೋನಾ ಏರಿಕೆಯಾಗುವ ಸಾಧ್ಯತೆಗಳನ್ನು ಸಹ ತಳ್ಳಿಹಾಕುವಂತಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಹೊರಡಿಸಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸುವುದಕ್ಕೂ ನಿರ್ಬಂಧ ಹೇರಿದೆ. ಕೊರೋನಾ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ 10 ಸಾವಿರ ರೂ. ದಂಡ ವಿಧಿಸುವುದಕ್ಕೂ ಸರ್ಕಾರ ಮುಂದಾಗಿದೆ. ಎಸಿ ಹಾಲ್ಗಳು, ಮಾಲ್, ಅಂಗಡಿಗಳಲ್ಲಿ ಕೊರೋನಾ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ 10 ಸಾವಿರ ರೂ. ದಂಡ, ನಾನ್ ಎಸಿ ಹಾಲ್ ಗಳಲ್ಲಿ ಕೊರೋನಾ ನಿಯಮ ಉಲ್ಲಂಘನೆ ಮಾಡಿದಲ್ಲಿ 5000 ರೂ. ದಂಡ ತೆರಬೇಕಾಗುವುದು ಎಂದು ಸರ್ಕಾರ ಈ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.