ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2020 ರ ಇಂಟರ್ನ್ಯಾಷನಲ್ ಭಾರತಿ ಫೆಸ್ಟಿವಲ್ ಅನ್ನು ಉದ್ದೇಶಿಸಿ ಡಿಸೆಂಬರ್ 11 ರ ಶುಕ್ರವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಗುರುವಾರ ಮಾಹಿತಿ ನೀಡಿದೆ.
ಮೋದಿ ಅವರು 2020 ರ ಫೆಸ್ಟಿವಲ್ ಅನ್ನು ಡಿಸೆಂಬರ್ 11 ರಂದು ಸಂಜೆ 04: 30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವರ್ಷ ಇದನ್ನು ವರ್ಚುವಲ್ ಮೋಡ್ನಲ್ಲಿ ಆಯೋಜಿಸಲಾಗುತ್ತಿದ್ದು, ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕವಿಗಳು ಮತ್ತು ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ” ಎಂದು ಪಿಎಂಒ ತಿಳಿಸಿದೆ.
ವಿಶೇಷವೆಂದರೆ, ತಮಿಳು ಕವಿ ಮತ್ತು ಬರಹಗಾರ ಮಹಾಕವಿ ಸುಬ್ರಮಣ್ಯ ಭಾರತಿಯವರ 138 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಉತ್ಸವವನ್ನು ವನವಿಲ್ ಸಾಂಸ್ಕೃತಿಕ ಕೇಂದ್ರ ಆಯೋಜಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.