ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಯಂತ್ರಣ, ಜಾನುವಾರು ಸಂರಕ್ಷಣಾ ವಿಧೇಯಕ 2020 ಗೆ ನಿನ್ನೆ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆತಿದೆ. ಈ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ಗೋ ಪೂಜೆಯನ್ನು ನೆರವೇರಿಸಲಾಯಿತು.
ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು ಗೋವುಗಳಿಗೆ ಪೂಜೆ ಸಲ್ಲಿಸುವ ಮೂಲಕ ಈ ವಿಧೇಯಕವನ್ನು ಸ್ವಾಗತಿಸಿದರು. ಬಳಿಕ ಮಾತನಾಡಿದ ಅವರು ಈ ಮಸೂದೆಯ ಅಂಗೀಕಾರದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಬಿಜೆಪಿ ಗೋ ಪೂಜೆ ನೆರವೇರಿಸುತ್ತಿದೆ. ಆಯಾ ಜಿಲ್ಲೆಗಳ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಾಯಕರು, ಕಾರ್ಯಕರ್ತರು ಸೇರಿದಂತೆ ಎಲ್ಲರೂ ಪಕ್ಷದ ಕಚೇರಿಗಳಲ್ಲಿ ಗೋ ಪೂಜೆ ನೆರವೇರಿಸಲು ಮುಂದಾಗಿದ್ದಾರೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ ಎಂದು ತಿಳಿಸಿದರು.
ಈ ವಿಧೇಯಕವನ್ನು ವಿಪಕ್ಷ ಕಾಂಗ್ರೆಸ್ನ ನಾಯಕರು ವಿರೋಧ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ವಿರೋಧ ಮಾಡುವುದೇ ಕೆಲಸ. ಅವರಿಗೆ ಬಿಜೆಪಿ ಸರ್ಕಾರ ಯಾವುದೇ ರೀತಿಯ ಉತ್ತಮ ಕಾರ್ಯ ಮಾಡಿದರೂ ಅದನ್ನು ವಿರೋಧಿಸಬೇಕು ಎಂಬ ಮನಸ್ಥಿತಿ. ಆದ್ದರಿಂದ ಎಲ್ಲಕ್ಕೂ ವಿರೋಧಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.