ಲಕ್ನೋ: ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವದ ಪರೇಡ್ನಲ್ಲಿ, ಉತ್ತರಪ್ರದೇಶವು ಅತ್ಯಂತ ವಿಭಿನ್ನ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಿದೆ. ಮೂಲಗಳ ಪ್ರಕಾರ, ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರ ಈ ಬಾರಿ ಪ್ರದರ್ಶನಗೊಳ್ಳಲಿದೆ.
ಈಗಾಗಲೆ ಈ ಪ್ರಸ್ತಾಪವನ್ನು ಯುಪಿಯ ಯೋಗಿ ಸರ್ಕಾರ ಕೇಂದ್ರಕ್ಕೆ ಕಳುಹಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮೊದಲ ಬಾರಿಗೆ ಯುಪಿ ಯಿಂದ ರಾಮ ಮಂದಿರಕ್ಕೆ ಸಂಬಂಧಿಸಿದ ಸ್ತಬ್ಧಚಿತ್ರ ಪ್ರಸ್ತುತಪಡಿಸಲಾಗುತ್ತಿದೆ. ಭಗವಾನ್ ರಾಮನಿಗೆ ಸಂಬಂಧಿಸಿದ ಅನೇಕ ಕಥೆಗಳನ್ನು ಸಹ ಇದರಲ್ಲಿ ತೋರಿಸಲಾಗುತ್ತದೆ ಎನ್ನಲಾಗಿದೆ.
ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಪಿಎಂ ನರೇಂದ್ರ ಮೋದಿ ಆಗಸ್ಟ್ 5 ರಂದು ಇದಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ದೇವಾಲಯ ನಿರ್ಮಿಸಲು ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.