ಬೆಂಗಳೂರು: ಕೊರೋನಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಂದಿನ ಕೆಲವು ತಿಂಗಳುಗಳ ಕಾಲ ಐಟಿ ಉದ್ಯೋಗಿಗಳು ಮನೆಯಿಂದಲೇ ಕಾರ್ಯ ನಿರ್ವಹಿಸಲಿದ್ದಾರೆ. ಐಟಿ ಕಚೇರಿಗಳನ್ನು ತೆರೆಯಬೇಕೆಂದು ಸರ್ಕಾರ ಹೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಐಟಿ ಸಂಸ್ಥೆಗಳಿಗೆ ಕಚೇರಿಗಳನ್ನು ತೆರೆಯಲು ಕಡ್ಡಾಯ ಮಾಡುವುದು ಅಸಾಧ್ಯ. ಅದರ ಬದಲು ಉದ್ಯೋಗಿಗಳು ಮನೆಯಿಂದ ಅಥವಾ ತಾವಿರುವಲ್ಲಿಂದಲೇ ತಮ್ಮ ಕಾರ್ಯ ನಿರ್ವಹಿಸುವುದಕ್ಕೆ ಮುಂದಿನ ಕೆಲವು ತಿಂಗಳುಗಳ ಕಾಲ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲಷ್ಟೇ ಐಟಿ ಬಿಟಿ ಸಂಸ್ಥೆಗಳನ್ನು ತೆರೆಯಲು ಸೂಚಿಸಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿಲ್ಲ ಎಂದು ತಿಳಿಸಿದ್ದಾರೆ.
ಒಂದು ಬಾರಿ ಕಚೇರಿ ತೆರೆದರೆ ಇತರ ಸೇವೆಗಳು ಸಹಜ ಸ್ಥಿತಿಗೆ ಮರಳುತ್ತವೆ ಎಂಬುದು ನಿಜ. ಆದರೆ ಕೊರೋನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣವಾಗಿಲ್ಲ. ಆದ್ದರಿಂದ ಯಾವುದೇ ಅಪಾಯಕ್ಕೆ ಆಹ್ವಾನ ನೀಡಬಾರದಾದ್ದರಿಂದ ಮನೆಯಿಂದಲೇ ಕೆಲಸ ನಿರ್ವಹಿಸುವುದು ಹೆಚ್ಚು ಸುರಕ್ಷಿತ ಎಂದು ಅಶ್ವತ್ಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.