ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಿಧೇಯಕವನ್ನು ವಿಧಾನ ಸಭೆಯಲ್ಲಿ ಮಂಡಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಗೋ ಪೂಜೆ ಹಮ್ಮಿಕೊಂಡಿತ್ತು.
ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಬಿಜೆಪಿ ಪಕ್ಷದ ಕಚೇರಿಗಳಲ್ಲಿ ಗೋ ಪೂಜೆ ನಿನ್ನೆಯಷ್ಟೇ ನಡೆದಿತ್ತು. ಇಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ವೀಧೇಯಕ ಮಂಡಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಮೊನ್ನೆಯಷ್ಟೇ ವಿಧಾನಸಭೆಯಲ್ಲಿ ಕರ್ನಾಟಕ ಗೋ ಸಂರಕ್ಷಣೆ ಮತ್ತು ಹತ್ಯೆ ಮಸೂದೆ 2020 ಅನ್ನು ರಾಜ್ಯ ಸರ್ಕಾರ ಮಂಡಿಸಿ, ಅಂಗೀಕಾರ ಪಡೆದಿತ್ತು. ನಿನ್ನೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕರು ಗೈರಾಗಿದ್ದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ನಲ್ಲಿ ಮಸೂದೆ ಮಂಡಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ವಾರ ವಿಧೇಯಕವನ್ನು ಹೊರಡಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.