ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೋನಾ ಅಲೆಯನ್ನು ಎದುರಿಸುವ ಹಿನ್ನೆಲೆಯಲ್ಲಿ 37.72 ಕೋಟಿ ರೂ. ವೆಚ್ಚದಲ್ಲಿ 40 ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಪ್ರಸ್ತಾಪಕ್ಕೆ ಕೊರೋನಾ ಕಾರ್ಯಪಡೆ ಒಪ್ಪಿಗೆ ಸೂಚಿಸಿದೆ.
ರಾಜ್ಯದ ಹತ್ತು ಜಿಲ್ಲಾ ಆಸ್ಪತ್ರೆಗಳು ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆ ಅಳವಡಿಸಲಾಗುವುದು. ಎರಡು ವಿಭಿನ್ನ ತಾಂತ್ರಿಕ ವಿಧಾನಗಳ ಮೂಲಕ ಆಮ್ಲಜನಕ ಪೂರೈಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. 90 ದಿನಗಳ ಅವಧಿಯಲ್ಲಿ ಕೊರೋನಾ ಪರೀಕ್ಷೆಯಲ್ಲಿ 45 ಕೋಟಿ ರೂ. ವೆಚ್ಚ ಮಾಡಲು ಮಂಜೂರಾತಿ ನೀಡಲಾಗಿದೆ. ತಲಾ 10 ಲಕ್ಷ ಆರ್ಟಿಪಿಸಿಆರ್ ಮತ್ತು ರ್ಯಾಪಿಡ್ ಆಂಟಿಜೆನ್ ಪರೀಕ್ಷಾ ಕಿಟ್ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ತುರ್ತು ಬಳಕೆಯ ಔಷಧಿ ಖರೀದಿಗಾಗಿ 22.50 ಕೋಟಿ ರೂ. ಬಿಡುಗಡೆಗೂ ಕಾರ್ಯಪಡೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಎರಡನೇ ಹಂತದ ಅಲೆಯನ್ನು ನಿಯಂತ್ರಣ, ಲಸಿಕೆಯ ವಿತರಣೆಗೆ ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಗಿದೆ. ಹೆಚ್ಚಿನ ಕೊರೋನಾ ಪರೀಕ್ಷೆಗಳನ್ನು ನಡೆಸಲು ಸೂಚಿಸಲಾಗಿದೆ. ಲಸಿಕೆಯ ದಾಸ್ತಾನಿಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿಗಳಿಗೆ, ಕೊರೋನಾ ವಾರಿಯರ್ಸ್ಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.