ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗಾಡ್ಸ್ ಗಿಫ್ಟ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈ ದೇಶದ ಸಂಪತ್ತು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಮ್ಮ ನಾಯಕರನ್ನು ಹಾಡಿಹೊಗಳಿದ್ದಾರೆ.
ಸುಷ್ಮಾ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಅವರು, ಮೋದಿಯವರ ಯಶಸ್ಸಿನಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಮತ್ತು ದೇಶದ ಪ್ರಗತಿಯನ್ನು ನಿಲ್ಲಿಸಲು ಪ್ರಯತ್ನಿಸುತ್ತದೆ ಎಂದಿದ್ದಾರೆ.
ಮೋದಿಯವರು 3ಡಿ ಎಂದಿರುವ ಅವರು, 3ಡಿ ಎಂದರೆ, decisiveness, dynamism and development (ಖಚಿತತೆ, ಉತ್ಸಾಹ ಮತ್ತು ಅಭಿವೃದ್ಧಿ) ಎಂದಿದ್ದಾರೆ.
ಸುಷ್ಮಾ ಅವರು ಈ ದೇಶದ ಸಂಪತ್ತು, ಅವರ ವಿರುದ್ಧ ಯಾವುದೇ ಆಪಾದನೆಗಳಿಲ್ಲ. ಆದರೂ ವಿನಾ ಕಾರಣ ಕಾಂಗ್ರೆಸ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
25 ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಿರುವ ಸ್ಪೀಕರ್ ಕ್ರಮವನ್ನು ಸಮರ್ಥಿಸಿಕೊಂಡಿರುವ ಅವರು, 1989ರಲ್ಲಿ ಮತ್ತು 2013ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಹಲವಾರು ಸಂಸದರನ್ನು ಅಮಾನತು ಮಾಡಲಾಗಿತ್ತು ಎಂದಿದ್ದಾರೆ.
ಪ್ರಜಾಪ್ರಭುತ್ವದ ಸೌಂದರ್ಯವೆಂದರೆ, ಇಲ್ಲಿ ಚಾ ಮಾರುವವ ಪ್ರಧಾನಿಯಾಗಬಹುದು, ಪೇಪರ್ ಮಾರುವವ ರಾಷ್ಟ್ರಪತಿಯಾಗಬಹುದು ಎಂದರು. ಅಲ್ಲದೇ ಕಲಾಂ ಅಂತ್ಯಸಂಸ್ಕಾರದ ದಿನ ಕೆಲ ಮಾಧ್ಯಮಗಳು ಯಾಕುಬ್ ಮೆಮೋನ್ ಗಲ್ಲಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.