ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯ ಗಡಿ ಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು, ಉನ್ನತ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು, ಗಲಭೆಗಳು ನಡೆಯದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ಈ ಸಂದರ್ಭದಲ್ಲಿ ಶಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಲಭೆಯನ್ನು ಪ್ರಚೋದನೆ ಮಾಡುವ ಕೆಲವು ಗುಂಪುಗಳು ರೈತರನ್ನು ಕೂಡಿಕೊಂಡಿರುವ ಸಾಧ್ಯತೆ ಇರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಪ್ರತಿಭಟನೆಗಳು ನಡೆಯದಂತೆ ಮತ್ತು ನಡೆದ ಪಕ್ಷದಲ್ಲಿ ಅವುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.