ನವದೆಹಲಿ: ದೇಶದ ಮತದಾರರಿಗೆ ಇನ್ನು ಮುಂದೆ ಡಿಜಿಟಲ್ ಚುನಾವಣಾ ಗುರುತಿನ ಚೀಟಿಗಳನ್ನು ನೀಡುವುದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಚಿಂತನೆ ನಡೆಸಿದೆ.
ಡಿಜಿಟಲ್ ಭಾವಚಿತ್ರವುಳ್ಳ ಚುನಾವಣಾ ಗುರುತಿನ ಚೀಟಿಗಳ ವಿತರಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕ ವಲಯದಿಂದಲೂ ಸಲಹೆಗಳು ಬಂದಿವೆ. ಈ ವಿಚಾರವನ್ನು ಯಾವ ರೀತಿಯಲ್ಲಿ ಸಮರ್ಥವಾಗಿ ಜಾರಿಗೊಳಿಸಬಹುದು ಎಂಬುದರ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಡಿಜಿಟಲ್ ಚುನಾವಣಾ ಗುರುತಿನ ಚೀಟಿ ಮೊಬೈಲ್, ವೆಬ್ಸೈಟ್, ಇ ಮೇಲ್ ಮೂಲಕವೂ ಸುಲಭವಾಗಿ ದೊರೆಯುತ್ತದೆ. ತ್ವರಿತವಾಗಿ ಮತ್ತು ಜನರಿಗೆ ಸುಲಭವಾಗಿ ಲಭ್ಯವಾಗಬೇಕೆಂಬ ದೃಷ್ಟಿಯಿಂದ ಡಿಜಿಟಲ್ ಗುರುತಿನ ಚೀಟಿ ಹೊರತರಲು ಉದ್ದೇಶಿಸಲಾಗಿದೆ. ಇದರಲ್ಲಿ ಮತದಾರರ ಭಾವಚಿತ್ರ ಸಹ ಸ್ಪಷ್ಟವಾಗಿ ಗೋಚರವಾಗಲಿದೆ. ಮತದಾರರನ್ನು ಸುಲಭವಾಗಿ ಗುರುತಿಸುವ ನಿಟ್ಟಿನಲ್ಲಿ ಇದು ಪೂರಕವಾಗಲಿದೆ. ಈ ನಿಟ್ಟಿನಲ್ಲಿ ಮುನ್ನೆಚರಿಕೆಯಾಗಿ ಹಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.