ನವದೆಹಲಿ: ಪಶ್ಚಿಮಬಂಗಾಳದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ಮತ್ತು ಬಿಜೆಪಿ ಮುಖಂಡ ಕೈಲಾಸ್ ವಿಜಯವರ್ಗೀಯ ಅವರ ವಾಹನದ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪಶ್ಚಿಮಬಂಗಾಳಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಬುಲೆಟ್ ಪ್ರೂಫ್ ವಾಹನದಲ್ಲಿದ್ದ ಕಾರಣ ನಡ್ಡಾ ಅವರಿಗೆ ದಾಳಿಯಲ್ಲಿ ಯಾವುದೇ ಹಾನಿಯಾಗಿರಲಿಲ್ಲ, ಆದರೆ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಪಕ್ಷದ ಹಲವಾರು ನಾಯಕರು ಗಾಯಗೊಂಡಿದ್ದಾರೆ. ಈ ಘಟನೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ ಅಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ವರದಿ ಕೇಳಿದೆ.
ಈ ಸಂದರ್ಭದಲ್ಲಿ ಅಮಿತ್ ಶಾ ಅವರ ಭೇಟಿ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
ಮುಂದಿನ ವರ್ಷ ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮಹತ್ವದ ಗೆಲುವು ಸಾಧಿಸಲು ಬಿಜೆಪಿ ದೃಢನಿಶ್ಚಯ ಮಾಡಿದೆ. ಈ ಹಿನ್ನಲೆಯಲ್ಲಿ ನಡ್ಡಾ ಮತ್ತು ಶಾ ಆ ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.