ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು, ಕರ್ತವ್ಯಕ್ಕೆ ಹಾಜರಾಗಬೇಕು. ಆ ಬಳಿಕ ತಮ್ಮ ಸಮಸ್ಯೆಗಳ ಬಗ್ಗೆ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ಅವಶ್ಯಕ ಸೇವೆಯಡಿಯಲ್ಲಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಿರತರಾಗಿರುವುದು ದುರದೃಷ್ಟಕರ ಸಂಗತಿ. ಇದರಿಂದ ರಾಜ್ಯದೆಲ್ಲೆಡೆ ಸಾರ್ವಜನಿಕರು ಪರದಾಡುವಂತಾಗಿದೆ. ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೂ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅವರೂ ಸಹ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಸಾರಿಗೆ ನೌಕರರನ್ನು ರೈತ ಮುಖಂಡರೆನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಎತ್ತಿ ಕಟ್ಟುವ, ಮುಷ್ಕರ ನಡೆಸುವ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲದೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲು, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಸಂಭವಿಸಲು ಕಾರಣರಾಗುತ್ತಿದ್ದಾರೆ. ಇದನ್ನರಿತು ಸಾರ್ವಜನಿಕ ಹಿತದೃಷ್ಟಿಯಿಂದ ನೌಕರರು ಕರ್ತವ್ಯಕ್ಕೆ ಹಾಜರಾಗಿ, ಬಳಿಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಪ್ರಯತ್ನ ನಡೆಸಿ ಎಂದು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.