ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 15ರಂದು ಗುಜರಾತ್ನ ಕಛ್ನಲ್ಲಿರುವ ಧೋರ್ಡೊಗೆ ಭೇಟಿ ನೀಡಲಿದ್ದು, ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.
ಈ ಯೋಜನೆಗಳಲ್ಲಿ ಡಸಲೀನೇಷನ್ ಘಟಕ, ಹೈಬ್ರಿಡ್ ನವೀಕರಿಸಬಹುದಾದ ಎನರ್ಜಿ ಪಾರ್ಕ್ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್ ಘಟಕ ಸೇರಿವೆ.
ಈ ಸಂದರ್ಭದಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಉಪಸ್ಥಿತರಿರಲಿದ್ದಾರೆ. ಪ್ರಧಾನಿ ವೈಟ್ ರನ್ಗೆ ಭೇಟಿ ನೀಡಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಪ್ರಧಾನಿ ಕಚೇರಿ ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
“ಕಛ್ನ ಮಾಂಡ್ವಿ ಯಲ್ಲಿ ಮುಂಬರುವ ಡಸಲೀನೇಷನ್ ಘಟಕದಿಂದಾಗಿ ಸಮುದ್ರದ ನೀರನ್ನು ಕುಡಿಯುವ ನೀರಿಗೆ ಪರಿವರ್ತಿಸುವ ನಿಟ್ಟಿನಲ್ಲಿ ಗುಜರಾತ್ ಮಹತ್ವದ ಹೆಜ್ಜೆ ಇಡಲಿದೆ. ದಿನಕ್ಕೆ 10 ಕೋಟಿ ಲೀಟರ್ ಸಾಮರ್ಥ್ಯ (100 ಎಂಎಲ್ಡಿ) ಹೊಂದಿರುವ ಈ ಡಸಲೀನೇಷನ್ ಘಟಕವು ನೀರಿನ ಸುರಕ್ಷತೆಯನ್ನು ಬಲಪಡಿಸುತ್ತದೆ “ಎಂದು ಪಿಎಂಒ ಹೇಳಿಕೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.