ನವದೆಹಲಿ: ಭಾರತದ ಬಾಹ್ಯಾಕಾಶ ಕ್ಷೇತ್ರವನ್ನು ಮುಕ್ತಗೊಳಿಸುವ ನಿರ್ಧಾರವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಹೊಸ ಯುಗವನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಐಟಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯ ರೀತಿಯಲ್ಲಿಯೇ ಭಾರತೀಯ ಪ್ರತಿಭೆಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಖ್ಯಾತಿ ಗಳಿಸಲಿದ್ದಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ನಿನ್ನೆ ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಉತ್ತೇಜಿಸಲು ಪ್ರಧಾನ ಮಂತ್ರಿಗಳು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಸ್ಟಾರ್ಟ್ ಅಪ್ ಮತ್ತು ಅಕಾಡೆಮಿಗಳೊಂದಿಗೆ ಸಂವಹನ ನಡೆಸಿದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನೀತಿಗಳು, ವೃತ್ತಿಪರತೆ ಮತ್ತು ಪಾರದರ್ಶಕತೆ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ಈ ಕ್ಷೇತ್ರಕ್ಕೆ ಸೇರುವ ಕಂಪನಿಗಳಿಗೆ ಪ್ರಯೋಜನಕಾರಿ ಎಂದು ಮೋದಿ ಹೇಳಿದರು.
ಭಾಗವಹಿಸುವವರಿಗೆ ಅವರ ಪ್ರಯತ್ನಗಳಿಗೆ ಸರ್ಕಾರದ ಸಂಪೂರ್ಣ ಬೆಂಬಲ ಸಿಗಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.
ಈ ವರ್ಷ ಮಹತ್ವದ ಸುಧಾರಣೆಗಳಿಗೆ ಸಾಕ್ಷಿಯಾದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ ಎಂದು ಮೋದಿ ಹೇಳಿದರು. ಸಂವಹನ ಮತ್ತು ಸಂಚರಣೆಯಲ್ಲಿ ಬಾಹ್ಯಾಕಾಶ ಕ್ಷೇತ್ರದ ಮಹತ್ವದ ಬಗ್ಗೆ ಮಾತನಾಡಿದ ಪ್ರಧಾನಿ, ಶೀಘ್ರದಲ್ಲೇ ದೇಶವು ಬಾಹ್ಯಾಕಾಶ ಸ್ವತ್ತುಗಳ ಉತ್ಪಾದನಾ ಕೇಂದ್ರವಾಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು. .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.