ನವದೆಹಲಿ: ದೇಶದಲ್ಲಿ ಸಾಮೂಹಿಕ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನಕ್ಕಾಗಿ ಕೇಂದ್ರವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮೊದಲ ಹಂತದಲ್ಲಿ ಸುಮಾರು 30 ಕೋಟಿ ಜನರಿಗೆ ಲಸಿಕೆ ನೀಡಲು ಯೋಜಿಸುತ್ತಿದೆ. ಫಿಜರ್, ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ತಮ್ಮ ಲಸಿಕೆಗಳಿಗೆ ಮಾರುಕಟ್ಟೆ ದೃಡೀಕರಣಕ್ಕಾಗಿ ಅರ್ಜಿ ಸಲ್ಲಿಸಿವೆ. ಕೋವಿಡ್-19 ಲಸಿಕೆಯ ತುರ್ತು ಬಳಕೆಯನ್ನು ಸರ್ಕಾರ ಅನುಮೋದಿಸಿದ ನಂತರ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾಗಲಿದೆ.
ಲಸಿಕೆಯನ್ನು ಮೊದಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವವರು ಮತ್ತು 50 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಬಳಿಕ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೆ ನೀಡಲಾಗುತ್ತದೆ. ನಂತರದ ಹಂತದಲ್ಲಿ ಎಲ್ಲರಿಗೂ ಲಸಿಕೆ ತಲುಪುವಂತೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಲಸಿಕೆ ಅಭಿಯಾನ ಪ್ರಕ್ರಿಯೆಯನ್ನು 20 ಸಚಿವಾಲಯಗಳು ಒಟ್ಟು ಸೇರಿ ನಿರ್ವಹಿಸಲಿವೆ ಎಂದು ಹೇಳಲಾಗಿದೆ.
ಡಿಜಿಟಲ್ ವೇದಿಕೆ ಕೋವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್ವರ್ಕ್ (ಕೋ-ವಿನ್) ವ್ಯವಸ್ಥೆಯನ್ನು ನೈಜ-ಸಮಯದ ಆಧಾರದ ಮೇಲೆ ಕೊರೊನಾವೈರಸ್ ಲಸಿಕೆ ಫಲಾನುಭವಿಗಳನ್ನು ಪತ್ತೆಹಚ್ಚಲು ಬಳಸಲಾಗುತ್ತದೆ. ವ್ಯಾಕ್ಸಿನೇಷನ್ ಸ್ಥಳದಲ್ಲಿ ಪೂರ್ವ-ನೋಂದಾಯಿತ ಫಲಾನುಭವಿಗಳಿಗೆ ಮಾತ್ರ ಆದ್ಯತೆಗೆ ಅನುಗುಣವಾಗಿ ಲಸಿಕೆ ನೀಡಲಾಗುತ್ತದೆ. ಸ್ಥಳದಲ್ಲೇ ನೋಂದಣಿಗೆ ಯಾವುದೇ ಅವಕಾಶವಿರುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.