ನವದೆಹಲಿ: ಭಾರತ ತನ್ನ ಇ-ಹೆಲ್ತ್ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಆರೋಗ್ಯ ಸಚಿವಾಲಯದ ಇ ಸಂಜೀವನಿ ಟೆಲಿಮೆಡಿಸಿನ್ ಸೇವೆ ನಿನ್ನೆ 10 ಲಕ್ಷ ಟೆಲಿ-ಸಮಾಲೋಚನೆಗಳ ಮೈಲಿಗಲ್ಲು ದಾಟಿದೆ. ಟೆಲಿಮೆಡಿಸಿನ್ ಸೇವೆ ಅಂತರ್ಜಾಲವನ್ನು ಬಳಸಿಕೊಂಡು ದೂರದಿಂದಲೇ ಆರೋಗ್ಯ ಸೇವೆಗಳನ್ನು ತಲುಪಿಸುತ್ತಿದೆ ಮತ್ತು ಇದು ಆರೋಗ್ಯ ಸೇವೆಗಳ ವ್ಯಾಪ್ತಿಯನ್ನು ವಿಸ್ತರಿಸುವುದಲ್ಲದೆ ಸಮಯ ಮತ್ತು ಹಣವನ್ನು ಉಳಿಸುವುದರ ಜೊತೆಗೆ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಸುಧಾರಿಸುತ್ತಿದೆ.
ಅಭಿವೃದ್ಧಿ ಹೊಂದುತ್ತಿರುವ ದೇಶವೊಂದು ರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ತಲುಪಿಸುವಲ್ಲಿ ಡಿಜಿಟಲ್ ರೂಪದ ಇ-ಸಂಜೀವನಿಯನ್ನು ಜಾರಿಗೊಳಿಸಿರುವುದು ಇದೇ ಮೊದಲು. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಇ-ಸಂಜೀವಿನಿ ಆರೋಗ್ಯ ಸೇವೆಗಳ ವಿತರಣೆಯಲ್ಲಿ ಭಾರಿ ಡಿಜಿಟಲ್ ಪರಿವರ್ತನೆಯನ್ನು ತಂದಿದ್ದಲ್ಲದೆ, ದೇಶದಲ್ಲಿ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಹೆಚ್ಚಿಸಿದೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಭಾರತದ 550 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ರೋಗಿಗಳು ಇ-ಸಂಜೀವನಿ ಬಳಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಇ-ಸಂಜೀವನಿ ಬಳಕೆದಾರರಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಬಳಕೆದಾರರು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು. ಒಟ್ಟು ರೋಗಿಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಒಂದಕ್ಕಿಂತ ಹೆಚ್ಚು ಬಾರಿ ಇ ಸಂಜೀವನಿ ಬಳಸಿದ್ದಾರೆ. ವೈದ್ಯರನ್ನು ಸಂಪರ್ಕಿಸಲು ಆಸ್ಪತ್ರೆಯ ಒಪಿಡಿಗಳನ್ನು ಭೇಟಿ ಮಾಡುವುದಕ್ಕಿಂತ ಸಾರ್ವಜನಿಕರು ಟೆಲಿಮೆಡಿಸಿನ್ಗೆ ಆದ್ಯತೆ ನೀಡಲು ಪ್ರಾರಂಭಿಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.