ಬೆಂಗಳೂರು: ರಾಜ್ಯದ ಐಟಿಐ ಕೋರ್ಸ್ಗಳ ಪಠ್ಯ ಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಬದಲಿಸಲು ಶಿಕ್ಷಣ ತಜ್ಞರು ಮತ್ತು ಉದ್ಯಮ ಪ್ರತಿನಿಧಿಗಳ ಸಮಿತಿಯನ್ನು ಸರ್ಕಾರ ರಚನೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಅವರು ಕೌಶಲಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಪ್ರಸ್ತುತ ಐಟಿಐ ನಲ್ಲಿ ಬೋಧಿಸುವ ಅನೇಕ ಕೋರ್ಸ್ಗಳಿಗೆ ಹೆಚ್ಚಿನ ಬೇಡಿಕೆ ಇಲ್ಲ. ಇದರಿಂದಾಗಿ ಐಟಿಐ ಮಾಡಿದವರಿಗೆ ಸೂಕ್ತ ಉದ್ಯೋಗ ದೊರೆಯುತ್ತಿಲ್ಲ. ಆದ್ದರಿಂದ ಮಾರುಕಟ್ಟೆಯಲ್ಲಿ ಹೆಚ್ಚು ಚಾಲ್ತಿಯಲ್ಲಿರುವ ವಿಚಾರಗಳಿಗೆ ಸಂಬಂಧಿಸಿದಂತೆ ಕೋರ್ಸ್ ಆರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.
ಪ್ರಸ್ತುತ ಐಟಿಐನಲ್ಲಿ ಸುಮಾರು 53 ಕೋರ್ಸ್ಗಳಿವೆ. ಇದರಲ್ಲಿ ಸುಮಾರು 43 ಕೋರ್ಸ್ಗಳಿಗೆ ಕಳೆದ ಬಾರಿ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದರು. ಆದ್ದರಿಂದ ಹೆಚ್ಚು ಉಪಯೋಗವೆನಿಸದ ಕೋರ್ಸ್ಗಳ ಬದಲು ಹೊಸ ಬೇಡಿಕೆಯ, ಉದ್ಯೋಗ ಪಡೆಯುವುದಕ್ಕೆ ಪೂರಕವೆನಿಸಿದ ಕೋರ್ಸ್ಗಳನ್ನು ಆರಂಭ ಮಾಡಲಾಗುವುದು ಎಂದು ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಇಎಸ್ಡಿಎಂ ವಲಯದಲ್ಲಿ 2022 ರ ವೇಳೆಗೆ 2 ಸಾವಿರ ನವೋದ್ಯಮಗಳ ಸ್ಥಾಪನೆ, 2025 ರ ವೇಳೆಗೆ 20 ಲಕ್ಷ ಉದ್ಯೋಗ ಸೃಷ್ಟಿಯಾಗುವಂತೆ ಪೂರಕ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ. ಈ ವಲಯದಲ್ಲಿ ನಾವಿನ್ಯತೆ ಉತ್ತೇಜಿಸುವ ದೃಷ್ಟಿಯಿಂದ ಕ್ರಮ ಕೈಗೊಳ್ಳುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.