News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗ್ರಾಮ ಪಂಚಾಯತ್ ಚುನಾವಣೆ: ನೀತಿ ಸಂಹಿತೆಗೆ ಆದ್ಯತೆ ನೀಡಲು ಚುನಾವಣಾ ಆಯೋಗ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆ‌ಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು, ಸ್ಪರ್ಧಾಳುಗಳು ಮಾದರಿ ನೀತಿ ಸಂಹಿತೆ ಮತ್ತು ಕಾನೂನು ಉಲ್ಲಂಘನೆ‌ಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಈ ಸಂಬಂಧ ಮಾತನಾಡಿರುವ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಹೊನ್ನಾಂಬ, ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ, ಸಭೆ ಸಮಾರಂಭಗಳಲ್ಲಿ ಭಾಗಿಗಳಾಗುವ, ರಾಜಕೀಯ ನಾಯಕರ ಭಾವಚಿತ್ರ‌ಗಳನ್ನು ಕರಪತ್ರ‌ಗಳಲ್ಲಿ ಮುದ್ರಿಸುವ, ಪಕ್ಷದ ಚಿಹ್ನೆ, ಬಾವುಟಗಳನ್ನು ಬಳಸಿ ಪ್ರಚಾರ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ಗಳಿಗೂ ಅವರಿಗೆ ಸೂಚನೆ ನೀಡಿದ್ದಾರೆ.

ಚುನಾವಣಾ ಸಭೆಗಳಲ್ಲಿ ವೇದಿಕೆಗಳಲ್ಲಿ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಕೆ ಮಾಡುವುದಕ್ಕೂ ಅವಕಾಶ ಇಲ್ಲ. ಅಭ್ಯರ್ಥಿ‌ಗಳು ತಾವು ಇಂತಹ ಪಕ್ಷದ ಬೆಂಬಲಿತ ಅಭ್ಯರ್ಥಿ‌ಗಳು ಎಂದು ಪ್ರಚಾರ‌ದ ಸಂದರ್ಭದಲ್ಲಿ ತಿಳಿಸುವಂತಿಲ್ಲ. ಆ ರೀತಿಯ ಮತಯಾಚನೆಗೂ ಅವಕಾಶವಿಲ್ಲ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top