ನವದೆಹಲಿ: 2021ರ ಭಾರತದ ಗಣರಾಜ್ಯೋತ್ಸವ ಸಮಾರಂಭಕ್ಕೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ನೀಡಿದ ಆಹ್ವಾನವನ್ನು ಬೋರಿಸ್ ಜಾನ್ಸನ್ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ 27 ವರ್ಷಗಳಲ್ಲಿ ರಾಜ್ಪತ್ ಮೆರವಣಿಗೆಯಲ್ಲಿ ಅತಿಥಿಯಾಗಿ ಭಾಗವಹಿಸುತ್ತಿರುವ ಮೊದಲ ಬ್ರಿಟಿಷ್ ಪ್ರಧಾನಿ ಜಾನ್ಸನ್ ಆಗಲಿದ್ದಾರೆ. ಜನವರಿ 26 ರ ಮೆರವಣಿಗೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೊನೆಯ ಯುಕೆ ಪ್ರಧಾನ ಮಂತ್ರಿ ಜಾನ್ ಮೇಜರ್. ಇವರು 1993 ರಲ್ಲಿ ಅತಿಥಿಯಾಗಿ ಭಾಗಿಯಾಗಿದ್ದರು.
ವರದಿಗಳ ಪ್ರಕಾರ, ನವೆಂಬರ್ 27 ರಂದು ಟೆಲಿಫೋನ್ ಸಂಭಾಷಣೆಯ ಸಮಯದಲ್ಲಿ ಮೋದಿ ಜಾನ್ಸನ್ರನ್ನು ಔಪಚಾರಿಕವಾಗಿ ಆಹ್ವಾನಿಸಿದರು ಎಂದು ಹೇಳಲಾಗಿದೆ. ನಂತರ ಜಾನ್ಸನ್ ಅವರು ಮುಂದಿನ ವರ್ಷ ಯುಕೆಯಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಮೊದಿಯನ್ನು ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ.
ಪ್ರತಿ ಬಾರಿಯೂ ಒರ್ವ ವಿದೇಶಿ ನಾಯಕನ ಉಪಸ್ಥಿತಿಯಲ್ಲಿ ಭಾರತದ ಗಣರಾಜ್ಯೋತ್ಸವ ಸಮಾರಂಭ ಜರುಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.