ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಅನಾಗರಿಕ ವರ್ತನೆಗೆ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅನೇಕ ಗಣ್ಯರು ಖಂಡನೆ ವ್ಯಕ್ತಪಡಿಸಿದ್ದಾರೆ.
ಚಿಂತಕರ ಚಾವಡಿ, ಹಿರಿಯರ ಪರಿಷತ್ನಲ್ಲಿ ಕಾಂಗ್ರೆಸ್ ನಾಯಕರು ಇಂದು ತಮ್ಮ ಗೂಂಡಾಗಿರಿ ಪ್ರದರ್ಶನ ಮಾಡಿದ್ದಾರೆ. ಇಂತಹ ಘಟನೆಯೊಂದಕ್ಕೆ ರಾಜ್ಯ ಸಾಕ್ಷಿಯಾದದ್ದು ನಿಜಕ್ಕೂ ಖೇದಕರ. ಇಂದಿನ ಈ ಘಟನೆಗೆ ಕಾಂಗ್ರೆಸ್ ಪಕ್ಷವೇ ಕಾರಣ. ಕಾಂಗ್ರೆಸ್ ಪಕ್ಷ ಇಂತಹ ನಡೆಯನ್ನು ಹಿಂದಿನಿಂದಲೂ ಅನುಸರಿಸಿಕೊಂಡೇ ಬಂದಿದ್ದು, ಇದು ದುರಾದೃಷ್ಟ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಪಕ್ಷದ ನಾಯಕರು ಇಂದು ವಿಧಾನ ಪರಿಷತ್ನಲ್ಲಿ ನೂಕಾಟ, ತಳ್ಳಾಟದ ಜೊತೆಗೆ ಉಪಸಭಾಪತಿಗಳ ಕತ್ತಿನ ಪಟ್ಟಿಗೆ ಕೈ ಹಾಕಿರುವುದು, ಅವರನ್ನು ಪೀಠದಿಂದ ಇಳಿಸಿ ಅವರ ಕುರ್ಚಿಯಲ್ಲಿ ಕುಳಿತುಕೊಳ್ಳುವ ಮೂಲಕ ಆ ಸ್ಥಾನಕ್ಕೆ ಅವಮಾನ ಎಸಗಿದ್ದಾರೆ. ಜೊತೆಗೆ ವಿಧಾನ ಪರಿಷತ್ನ ಬಾಗಿಲಿಗೆ ಕಾಲಿನಿಂದ ಒದೆಯುವ ಮೂಲಕ ಅನಾಗರಿಕರಂತೆ ವರ್ತಿಸಿದ್ದಾರೆ. ಇವೆಲ್ಲವೂ ಖಂಡನೀಯ ಎಂದು ಅನೇಕ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ರಾಜ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.