ಪಣಜಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ನೀಡಿದ ದೂರಿನ ಹಿನ್ನಲೆಯಲ್ಲಿ ಗೋವಾದ ಫ್ಯಾಬ್ ಇಂಡಿಯಾ ಬಟ್ಟೆ ಸ್ಟೋರ್ನ ನಾಲ್ಕು ಸಿಬ್ಬಂದಿಗಳನ್ನು ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.
ಅದರ ಹಿರಿಯ ಅಧಿಕಾರಿಗಳನ್ನು ಇಂದು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.
ನಿನ್ನೆ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ ಸ್ಟೋರ್ಗೆ ತೆರಳಿದ್ದ ಸ್ಮೃತಿ ಇರಾನಿ ಅದರ ಟ್ರಯಲ್ ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ತಕ್ಷಣ ಸ್ಥಳೀಯ ಶಾಸಕ ಮೈಕೆಲ್ ಲೋಬೋ ಅವರನ್ನು ಸ್ಥಳಕ್ಕೆ ಕರೆಯಿಸಿ ಅವರು ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ.
ಬಳಿಕ ಶಾಸಕರು ಬಟ್ಟೆ ಸ್ಟೋರ್ನ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಫ್ಯಾಬ್ ಇಂಡಿಯಾ ಉದ್ದೇಶಪೂರ್ವಕವಾಗಿಯೇ ಟ್ರಯಲ್ ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.