ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಶ್ಚಿಮ ಬಂಗಾಳ ಭೇಟಿಗೆ ಕೆಲವೇ ದಿನಗಳು ಇರುವಂತೆ, ಬಿಜೆಪಿ ನಾಯಕರ ನಿಯೋಗ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ಪಶ್ಚಿಮಬಂಗಾಳದಲ್ಲಿ ನೀತಿ ಸಂಹಿತೆ ಜಾರಿಗೊಳಿಸುವಂತೆ ಮತ್ತು ಕೇಂದ್ರ ಪಡೆಗಳನ್ನು ನಿಯೋಜನೆ ಮಾಡುವಂತೆ ಒತ್ತಾಯಿಸಿದೆ.
ಬಿಜೆಪಿ ನಿಯೋಗವು ಪಶ್ಚಿಮಬಂಗಾಳದಲ್ಲಿ ಜನರ ಪ್ರತಿನಿಧಿತ್ವ ಕಾಯ್ದೆಯ ಸೆಕ್ಷನ್ 15 ಅನ್ನು ಆಹ್ವಾನಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಂಗಾಳ ಬಿಜೆಪಿ ನಿಯೋಗವು ಆ ಸೆಕ್ಷನ್ ನಿಬಂಧನೆಗಳ ಪ್ರಕಾರ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆಯನ್ನು ಮೊದಲೇ ವಿಧಿಸಬೇಕೆಂದು ಒತ್ತಾಯಿಸಿದೆ. ಸಾಮಾನ್ಯವಾಗಿ, ನೀತಿ ಸಂಹಿತೆಯು ಚುನಾವಣೆಯ ದಿನಾಂಕಗಳನ್ನು ಘೋಷಿಸಿದ ನಂತರವೇ ಜಾರಿಗೆ ಬರುತ್ತದೆ. ಅದರೆ ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೊದಲೇ ಪಶ್ಚಿಮಬಂಗಾಳದಲ್ಲಿ ವಿಧಿಸುವಂತೆ ಬಿಜೆಪಿ ಬೇಡಿಕೆ ಇಡುತ್ತಿದೆ.
ಬಿಜೆಪಿ ಸಂಸದ ಸ್ವಪನ್ ದಾಸ್ಗುಪ್ತಾ ನೇತೃತ್ವದ ನಿಯೋಗ ಕಾನೂನು ಸುವ್ಯವಸ್ಥೆ ಮತ್ತು ರಾಜಕೀಯ ಪಕ್ಷಪಾತವನ್ನು ಉಲ್ಲೇಖಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಕೆ ಮಾಡಿತು.
“ಪಶ್ಚಿಮಬಂಗಾಳದಲ್ಲಿನ ಅಸಾಧಾರಣ ಸಂದರ್ಭಗಳನ್ನು ಪರಿಗಣಿಸಿ, ಮಾದರಿ ನೀತಿ ಸಂಹಿತೆಯನ್ನು ಶೀಘ್ರವಾಗಿ ಅನ್ವಯಿಸಬೇಕು ಎಂದು ನಾವು ಆಯೋಗವನ್ನು ಕೇಳಿದ್ದೇವೆ” ಎಂದು ಬಿಜೆಪಿ ರಾಜ್ಯಸಭಾ ಸಂಸದ ಸ್ವಪನ್ ದಾಸ್ಗುಪ್ತಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.