ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಗೆ ನಿನ್ನೆ ವಿಧಾನ ಪರಿಷತ್ನಲ್ಲಿ ಅಂಗೀಕಾರ ಪಡೆಯುವುದು ಸರ್ಕಾರಕ್ಕೆ ಅಸಾಧ್ಯವಾದ ಹಿನ್ನೆಲೆಯಲ್ಲಿ ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಕಳೆದ ವಾರ ವಿಧಾನ ಮಂಡಲ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ಮಂಡಿಸಿ, ಅಂಗೀಕಾರ ಪಡೆದಿದ್ದರು. ಆ ಬಳಿಕ ನಿನ್ನೆಯ ವಿಧಾನ ಪರಿಷತ್ ಅಧಿವೇಶನದಲ್ಲಿ ಈ ಕಾಯ್ದೆ ಮಂಡಿಸಿ ಅಂಗೀಕಾರ ಪಡೆಯುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ನಿನ್ನೆಯ ಚಿಂತಕರ ಚಾವಡಿಯ ಕಲಾಪ ಕಾಂಗ್ರೆಸ್ ಗೂಂಡಾಗಿರಿಯ ಕಾರಣದಿಂದ ನಡೆಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ತನ್ನ ಚುನಾವಣಾ ಸಂದರ್ಭದ ಪ್ರಣಾಳಿಕೆಯಲ್ಲಿಯೇ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ತರಲು ಮುಂದಾಗಿರುವುದು ಪ್ರತಿಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಆದರೆ ರಾಜ್ಯದ ಬಹುಸಂಖ್ಯಾತ ಜನರಿಗೆ ಈ ಕಾಯ್ದೆ ಸಂತಸವನ್ನು ಉಂಟುಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.