ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 800 ಕ್ಕೂ ಅಧಿಕ ಅಂಚೆ ಕಚೇರಿಗಳಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ವಿದ್ಯುತ್, ನೀರಿನ ಬಿಲ್, ಗ್ಯಾಸ್ ಬಿಲ್ ಪಾವತಿ ಮಾಡಬಹುದು. ಅದರೊಂದಿಗೆ ವಿಮೆ, ಇಎಂಐಗಳನ್ನು ಸಹ ಪಾವತಿ ಮಾಡಬಹುದು ಮತ್ತು ಸಾಲ ಪಡೆಯಲು ಆನ್ಲೈನ್ ಅರ್ಜಿ ಸಲ್ಲಿಕೆಗೂ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಈಗಾಗಲೇ ಮೂರು ತಿಂಗಳ ಪ್ರಾಯೋಗಿಕ ಸೇವೆಯನ್ನು ಸಂಪೂರ್ಣಗೊಳಿಸಿರುವ ಅಂಚೆ ಇಲಾಖೆ, ರಾಜ್ಯದ 851 ಅಂಚೆ ಕಚೇರಿಗಳು ಸೇರಿದಂತೆ ದೇಶದ 10 ಸಾವಿರಕ್ಕೂ ಅಧಿಕ ಅಂಚೆ ಕಚೇರಿಗಳಲ್ಲಿ ಜನ ಸೇವಾ ಕೇಂದ್ರಗಳನ್ನು ಪ್ರಾರಂಭ ಮಾಡಿದೆ. ದೇಶದ ಸಾಮಾನ್ಯ ಸೇವೆಗಳ ಕೇಂದ್ರದ ಜೊತೆಗೆ ಒಪ್ಪಂದ ಮಾಡಿಕೊಂಡಿರುವ ಅಂಚೆ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಸಚಿವಾಲಯದ ವಿಶೇಷ ವಾಹನವನ್ನು ಸಹ ಕೇಂದ್ರಗಳಲ್ಲಿ ಸ್ಥಾಪನೆ ಮಾಡಿದೆ.
ಕರ್ನಾಟಕ ರಾಜ್ಯದ 50% ಅಂಚೆ ಕಚೇರಿಗಳಲ್ಲಿ ಈ ಜನಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಉತ್ತರ ಕರ್ನಾಟಕದಲ್ಲಿ 345 ಮತ್ತು ದ. ಕರ್ನಾಟಕದ 386, ಬೆಂಗಳೂರಿನ 120 ವಲಯಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ. ಜಿ2ಸಿ ಸೇವೆಗಳನ್ನು ಸಹ ಅಂಚೆ ಕಚೇರಿಯಲ್ಲಿ ಜನರಿಗೆ ಒದಗಿಸಲಾಗುತ್ತಿದ್ದು, ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆ, ಪಿಎಂ ಜನ ಆರೋಗ್ಯ ಯೋಜನೆ, ರಾಷ್ಟ್ರೀಯ ಪಿಂಚಣಿ ಯೋಜನೆ, ಪ್ಯಾನ್ ಕಾರ್ಡ್, ಇ-ಸ್ಟ್ಯಾಂಪ್ ಸೇವೆಗಳು ಮೊದಲಾದವುಗಳನ್ನು ಸಹ ಅಂಚೆ ಕಚೇರಿಯಲ್ಲಿ ಕಾಣಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.