ಬೆಂಗಳೂರು: ರಾಜ್ಯ ಸರ್ಕಾರದಿಂದ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮ-2005 ರ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗ ಸ್ಪಷ್ಟವಾಗಿ ತಿಳಿಸಿದೆ.
ಬೆಂಗಳೂರಿನ ಸೈಂಟ್ ಜೋಸೆಫ್ ಸಂಜೆ ಕಾಲೇಜು, ಸೈಂಟ್ ಜೋಸೆಫ್ ಕಲಾ ಮತ್ತು ವಿಜ್ಞಾನ ಕಾಲೇಜುಗಳು ಸರ್ಕಾರದಿಂದ ಅನುದಾನ ಪಡೆಯುತ್ತಿವೆ. ಈ ಅನುದಾನ ಜನರ ತೆರಿಗೆಯ ಮೊತ್ತವಾಗಿರುವುದರಿಂದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮದ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಮಾಹಿತಿ ಆಯೋಗ ತಿಳಿಸಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ ಈ ಕಾಲೇಜುಗಳು ಮಾಹಿತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಈ ಸಂಸ್ಥೆಗಳು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಸುಧಾ ಕಟ್ಟಾ ಎಂಬವರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು ಈ ಸ್ಪಷ್ಟನೆಯನ್ನು ನೀಡಿದೆ. ಅಲ್ಲದೆ ಅರ್ಜಿ ಸಲ್ಲಿಸಿರುವವರು ಯಾವ ಮಾಹಿತಿ ಕೋರಿದ್ದಾರೋ, ಅದನ್ನು 30 ದಿನಗಳೊಳಗಾಗಿ ನೀಡುವಂತೆಯೂ ಶಿಕ್ಷಣ ಸಂಸ್ಥೆಗಳಿಗೆ ಆದೇಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.