ನವದೆಹಲಿ: ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹೊಸ ಡಿಜಿಟಲ್ ಪಾವತಿ ಅಪ್ಲಿಕೇಶನ್ ‘DakPay’ ಅನ್ನು ಅನಾವರಣಗೊಳಿಸಿದೆ. ಭಾರತದಾದ್ಯಂತ ಕೊನೆಯ ಮೈಲಿಯವರೆಗೂ ಡಿಜಿಟಲ್ ಫೈನಾನ್ಶಿಯಲ್ ಸೇವೆ ಒದಗಿಸುವ ಪ್ರಯತ್ನಗಳ ಭಾಗವಾಗಿ ಈ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿದೆ.
‘DakPay’ ಕೇವಲ ಡಿಜಿಟಲ್ ಪಾವತಿ ಅಪ್ಲಿಕೇಶನ್ ಅಲ್ಲ. ಇದು ಸಮಾಜದ ವಿವಿಧ ವರ್ಗಗಳ ಆರ್ಥಿಕ ಅಗತ್ಯಗಳನ್ನು ಪೂರೈಸಲು ರಾಷ್ಟ್ರದಾದ್ಯಂತದ ವಿಶ್ವಾಸಾರ್ಹ ಅಂಚೆ ಜಾಲದ ಮೂಲಕ ಇಂಡಿಯಾ ಪೋಸ್ಟ್ ಮತ್ತು ಐಪಿಪಿಬಿ ಒದಗಿಸುವ ಡಿಜಿಟಲ್ ಹಣಕಾಸು ಮತ್ತು ಬ್ಯಾಂಕಿಂಗ್ ಸೇವೆಗಳ ತಾಣ ಆಗಿದೆ.
ಇದನ್ನು ಪ್ರಾರಂಭಿಸಿದ ಕೇಂದ್ರ ಸಂವಹನ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರು, ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಪ್ರಯತ್ನಗಳನ್ನು ಶ್ಲಾಘಿಸಿದರು.
‘DakPay’ ಪ್ರಾರಂಭವು ಇಂಡಿಯಾ ಪೋಸ್ಟ್ನ ಪರಂಪರೆಯನ್ನು ಹೆಚ್ಚಿಸುತ್ತದೆ, ಅದು ಪ್ರತಿ ಮನೆಯನ್ನೂ ತಲುಪುವಂತೆ ಮಾಡುತ್ತಿದೆ ಎಂದಿದ್ದಾರೆ.
ಈ ನವೀನ ಸೇವೆಯು ಆನ್ಲೈನ್ನಲ್ಲಿ ಬ್ಯಾಂಕಿಂಗ್ ಸೇವೆಗಳು ಮತ್ತು ಅಂಚೆ ಉತ್ಪನ್ನಗಳಿಗೆ ಪ್ರವೇಶವನ್ನು ನೀಡುವುದಲ್ಲದೆ, ಮನೆ ಬಾಗಿಲಿನಲ್ಲಿ ಅಂಚೆ ಹಣಕಾಸು ಸೇವೆಗಳನ್ನು ಪಡೆಯಬಹುದು ಎಂಬ ವಿಶಿಷ್ಟ ಪರಿಕಲ್ಪನೆಯಾಗಿದೆ ಎಂದು ಅವರು ಹೇಳಿದರು.
ಈ ನವೀನ ಆ್ಯಪ್ ಜನರು ಸುಲಭವಾಗಿ ಹಣವನ್ನು ವರ್ಗಾಯಿಸಲು ಮತ್ತು ಸ್ವೀಕರಿಸಲು ಸಹಾಯ ಮಾಡುತ್ತದೆ ಮತ್ತು ಸ್ಮಾರ್ಟ್ಫೋನ್ ಇಲ್ಲದವರು ಪೋಸ್ಟ್ಮೆನ್ಗಳ ಸಹಾಯದಿಂದ ಈ ಆ್ಯಪ್ನಲ್ಲಿ ಹಣದ ವಹಿವಾಟು ನಡೆಸಬಹುದು ಎಂದು ಅಂಚೆ ಇಲಾಖೆಯ ಕಾರ್ಯದರ್ಶಿ ಪ್ರದೀಪ್ತ ಕುಮಾರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.